ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಲು,ಜೊತೆಗೆ ಯುವಕರನ್ನು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ರೀತಿಯ ಕ್ರಮಗಳನ್ನು ಅನುಸರಿಸಲಾಗುತ್ತಿದ್ದು,ಖಾಲಿ ಇರುವ ಸಂಘಟನಾತ್ಮಕ ಹುದ್ದೆಗಳನ್ನು ತುಂಬಿ,ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ ಸದ್ದಿಲ್ಲದೇ ನಡೆದಿದೆ.
ರಾಜ್ಯದ ಕಾಂಗ್ರೆಸ್ ನಾಯಕರು ವಿವಿಧ ಜಿಲ್ಲೆಗಳಿಗೆ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಭೂತ್ ಮಟ್ಟದಲ್ಲಿ ಬೆಳೆಸುವ ಪ್ರಕ್ರಿಯೆ ಆರಂಭಿಸಿದ್ದು ಬೆಳಗಾವಿ ಜಿಲ್ಲೆಯಲ್ಲೂ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮೀತಿಯಲ್ಲೂ ಸರ್ಜರಿ ಮಾಡಲಾಗಿದೆ.ನೂರಾರು ಯುವಕರ ಪಡೆಯನ್ನು ಹೊಂದಿರುವ,ಯುವ ನಾಯಕ ಪ್ರದೀಪ ಎಂ.ಜೆ ಅವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮೀತಿಯ ಪ್ರಧಾನ ಕಾರ್ಯದರ್ಶಿ ( ಆಡಳಿತ) ಯನ್ನಾಗಿ ನೇಮಕ ಮಾಡಲಾಗಿದ್ದು ದೆ.
ಪ್ರದೀಪ ಎಂ.ಜೆ ಅವರು ಬೆಳಗಾವಿಯಲ್ಲಿ ಹಲವಾರು ವರ್ಷಗಳಿಂದ ತಮ್ಮದೇ ಆದ ಯುವಕರ ಪಡೆ ಕಟ್ಟಿಕೊಂಡು ಕಾಂಗ್ರೆಸ್ ಪಕ್ಷದ ಘಟನೆಯಲ್ಲಿ ತೊಡಗಿಸಿಕಡಿದ್ದು,ಈಗ ಅವರಿಗೆ ಜಿಲ್ಲಾ ಸಮೀತಿಯಲ್ಲಿ ಆಡಳಿತಾತ್ಮಕ ಹುದ್ದೆ ನೀಡಿ,ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ನೀಡಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮೀತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರದೀಪ ಎಂ.ಜೆ ಅವರು ಇಂದು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿ ಇಂದಿನಿಂದ ಪಕ್ಷದ ಸಂಘಟನೆಗಾಗಿ ಬೆಳಗಾವಿ ಜಿಲ್ಲೆಯಲ್ಲಿ ದೀಪ ಬೆಳಗುವ ಕಾರ್ಯವನ್ನು ಆರಂಭಿಸಲಿದ್ದಾರೆ ಪ್ರದೀಪ…..