ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಗೆ ಮಹೂರ್ತ ಫಿಕ್ಸ್ ಆಗಿದ್ದು,ಈ ಚುನಾವಣೆ ಬಹುತೇಕ ಪಕ್ಷದ ಚಿಹ್ನೆಯ ಮೇಲೆ ನಡೆಯಲಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ರಾಜಕೀಯ ಪಕ್ಷಗಳು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆಯ ಆಧಾರದ ಮೇಲೆ ನಡೆಸುವ ಇಂಗಿತವನ್ನ ವ್ಯೆಕ್ತಪಡಿಸಿದ್ದು ಈ ಎರಡೂ ಪಕ್ಷಗಳು ರಾಜ್ಯ ಅದ್ಯಕ್ಷರ ಜೊತೆ ಸಮಾಲೋಚನೆ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತು ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ಶಾಸಕ ಅಭಯ ಪಾಟೀಲ ,ಬೆಳಗಾವಿ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆಯ ಮೇಕೆ ಸ್ಪರ್ದೆ ಮಾಡುವ ಕುರಿತು ಪಕ್ಷದ ವೇದಿಕೆಯ ಮೇಲೆ ಹಲವಾರು ಬಾರಿ ಚರ್ಚೆ ಆಗಿದೆ. ಈ ಕುರಿತು ಪಕ್ಷದ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಭಿ ಫಾರ್ಮ್ ಕೊಡುವ ಪ್ರಕ್ರಿಯೆ ಆರಂಭ ಮಾಡ್ತೀವಿ. ಎಂದು ಹೇಳಿದ್ದಾರೆ.
ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜಿವಾಲಾ ಅವರು ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆಯ ಮೇಲೆ ಎದುರಿಸುವಂತೆ ಈಗಾಗಲೇ ಸೂಚನೆ ಕೊಟ್ಟಿದ್ದು, ಈ ಕುರಿತು ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಅವರ ಜೊತೆ ಚರ್ಚೆ ಮಾಡಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳುವದಾಗಿ ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ರಾಜು ಸೇಠ ತಿಳಿಸಿದ್ದಾರೆ.
ಈ ಎರಡೂ ರಾಜಕೀಯ ಪಕ್ಷಗಳು ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸುವ ನಿರ್ಧಾರ ಕೈಗೊಂಡರೆ,ಪ್ರಾದೇಶಿಕ ಪಕ್ಷವಾಗಿರುವ ಜೆ.ಡಿಎಸ್ ಕೂಡಾ ಚಿಹ್ನೆಯ ನಿರ್ಧಾರಕ್ಕೆ ಬರುವ ಅನಿವಾರ್ಯತೆ ಎದುರಾಗಬಹುದು
ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಎಂಐಎಂ ,ಹಾಗು ಆಮ್ ಆದ್ಮಿ ಪಾರ್ಟಿಗಳು ಎಂಟ್ರಿ ಮಾಡುವದರಲ್ಲಿ ಸಂದೇಹವೇ ಇಲ್ಲ.