ಬೆಳಗಾವಿ- ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇಂದು ಮೊದಲಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಮಧ್ತಾಹ್ನ ಸುಮಾರು ಎರಡು ಗಂಟೆಗೆ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸುವ ಅವರು,ಅಧಿಕಾರಿಗಳ ಜೊತೆ ಕೋವೀಡ್ ನಿರ್ವಹಣೆ ಮತ್ತು ಪ್ರವಾಹ ಪರಿಹಾರ ಕಾಮಗಾರಗಳ ಪ್ರಗತಿ ಪರಶೀಲನೆ ನಡೆಸಲಿದ್ದಾರೆ. ನಂತರ ಸಾಂಬ್ರಾ ವಿಮಾನ ನಿಲ್ಧಾಣದ ಮೂಲಕ ರೆಗ್ಯಲರ್ ಫ್ಲಾಯಿಟ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿರುವ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮಾಹಿತಿಯೂ ಇದೆ.ಇದೊಂದು ಕ್ರಾಂತಿಯ ನೆಲ ಎನ್ನುವ ಅಭಿಮಾನವೂ ಇದ್ದು ಅವರು ಮುಖ್ಯಮಂತ್ರಿಯಾಗಿ ಇಂದು ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ.
ಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಜನ ನಲುಗಿ ಹೋಗಿದ್ದಾರೆ.ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ,ಸೂರು ಕಳೆದುಕೊಂಡ ಬಡವರಿಗೆ ಈ ನಾಡಿನ ದೂರೆ ಯಾವ ರೀತಿಯಲ್ಲಿ ಸಮಾಧಾನ ಪಡಿಸುತ್ತಾರೆ ಎನ್ನುವದನ್ನು ಕಾದು ನೋಡಬೇಕಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ