Home / Breaking News / ಬೆಳಗಾವಿಯ ಮಾಧ್ಯಮ‌ ಪ್ರತಿನಿಧಿಗಳಿಗೆ ಕೋವಿಶೀಲ್ಡ್ ಲಸಿಕೆ

ಬೆಳಗಾವಿಯ ಮಾಧ್ಯಮ‌ ಪ್ರತಿನಿಧಿಗಳಿಗೆ ಕೋವಿಶೀಲ್ಡ್ ಲಸಿಕೆ

ಬೆಳಗಾವಿ,- ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರ ಸಮ್ಮುಖದಲ್ಲಿ ಗುರುವಾರ (ಮೇ 13) ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಶೀಲ್ಡ್ ಲಸಿಕಾಕರಣಕ್ಕೆ ಚಾಲನೆ ನೀಡಲಾಯಿತು.

ನಗರದ ಶ್ರೀನಗರ ರಸ್ತೆಯ ವಂಟಮುರಿ ಆರೋಗ್ಯ ಕೇಂದ್ರದಲ್ಲಿ ಸರಕಾರದ ನಿರ್ದೇಶನದ ಪ್ರಕಾರ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕೆ ನೀಡಲಾಯಿತು.

ಲಸಿಕಾಕರಣಕ್ಕೆ ಚಾಲನೆ ನೀಡಿದ ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು, ಕೋವಿಡ್ ಸಂದರ್ಭದಲ್ಲಿ ಮುಂಚೂಣಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಸುರಕ್ಷತೆ ದೃಷ್ಟಿಯಿಂದ ಲಸಿಕೆ ನೀಡಲು ಸರಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ. ಇದೇ ರೀತಿ ಮುಂಬರುವ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕೆಯನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಸದರಾದ ಮಂಗಲ ಅಂಗಡಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ್ ಆಮಟೆ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿಗಾರರು, ಛಾಯಾಗ್ರಾಹಕರು, ಉಪ ಸಂಪಾದಕರು ಸೇರಿದಂತೆ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದ 150 ಕ್ಕೂ ಅಧಿಕ ಪ್ರತಿನಿಧಿಗಳು ಕೋವಿಶೀಲ್ಡ್ ಲಸಿಕೆಯನ್ನು ಪಡೆದುಕೊಂಡರು.
****

Check Also

52 ದಿನಗಳ ಬೀಗಕ್ಕೆ ಬ್ರೆಕ್,ಬೆಳಗಾವಿ ಇಂದಿನಿಂದ ಖುಲ್ಲಂ ಖುಲ್ಲಾ…!!!

ಬೆಳಗಾವಿ- ಬೆಳಗಾವಿ ಜಿಲ್ಲೆ ಕೊರೋನಾ ಮಹಾಮಾರಿಯ ಕಾಟಕ್ಕೆ ತತ್ತರಿಸಿತ್ತು,ಜಿಲ್ಲೆಯ ಜನ ಬರೊಬ್ಬರಿ 52 ದಿನಗಳ ಅನುಭವಿಸಿದ ಮನೆವಾಸದಿಂದ ಇಂದು ಮುಕ್ತಿ …

Leave a Reply

Your email address will not be published. Required fields are marked *