Breaking News

22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ

22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ

ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು.

ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬೆನ್ನೆಲುಬಾಗಿ ನಿಂತ ಸತೀಶ ಜಾರಕಿಹೊಳಿ:-

ಈ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಕ್ಷೇತ್ರದ ಅಭಿವೃದ್ದಿ ಹಾಗೂ ರಾಜ್ಯದಲ್ಲಿ ಯಮಕನಮರಡಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಪರಿರ್ವತಿಸಲು ಸತೀಶ ಜಾರಕಿಹೊಳಿ ಅವರು ಸದಾ ನಿಮ್ಮ ಬೆನ್ನೆಲುಬಾಗಿ ನಿಂತಿದ್ದಾರೆ.

ಈಗಾಗಲೇ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸಮುದಾಯ ಭವನ, ಶಿಕ್ಷಣಕ್ಕಾಗಿ ಕೋಟ್ಯಾಂತರ ಅನುದಾನ ನೀಡಿದ್ದಾರೆ. ಈ ಕ್ಷೇತ್ರದ ಸಹೋದರರ ಏಳಿಗೆ ತುಂಬಾ ಮುಖ್ಯವಾಗಿದೆ. ಅದಕ್ಕಾಗಿ ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಬೆಳೆದು ಸಾಧನೆ ಮಾಡಬೇಕು. ನಿಮ್ಮ ಸಮಸ್ಯೆಗೆ ತಂದೆಯವರ ಸಹಕಾರ ಇದೆ.

ರಾಜ್ಯದಲ್ಲಿ ಯಮಕನಮರಡಿ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ನಮ್ಮದು ಅದಕ್ಕೆ ನಿಮ್ಮ ಸಹಕಾರ ಅಗತ್ಯವಾಗಿದೆ. ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾನ ಹಾಗೂ ಸಮುದಾನಭವನ ಕ್ಷೇತ್ರದ ಜನರ ಬಹುದಿನಗಳಿಂದ ಬೇಡಿಕೆ ಈಡೇರಿದೆ. ಯಮಕನಮರಡಿ ಕ್ಷೇತ್ರದ ಜನತೆ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೆವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅರವಿಂದ ಕಾರ್ಜಿ, ಪಾಂಡು ಮನ್ನಿಕೇರಿ, ಯಲ್ಲಪ್ಪ ಬುಡ್ರಿ, ರಾಜು ಬಾಬುಗೌಡ, ಮಲಿಕ ಮುಲ್ಲಾ, ಲಕ್ಕಪ್ಪ ನಾಯಕ , ವಾಯಿದ್ ಮುಲ್ಲಾ, ಬಾಳೇಶ ದಾಸನಟ್ಟಿ ಹಾಗೂ ಇತರರು ಇದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *