Breaking News

ಬಸ್ಸಿನಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಆರೋಪಿ ಅರೆಸ್ಟ್..

ಚಲಿಸುತ್ತಿದ್ದ ಬಸ್ಸಿನಲ್ಲಿನ ಮಹಿಳೆ ಮೇಲೆ ಮೃಗದಂತೆ ಎರಗಿ ಮರಾಕಾಸ್ತ್ರಗಳಿಂದ ಹಲ್ಲೆ: ಜೀವನ್ಮರಣ ಹೋರಾಟ ನಡೆಸುತ್ತಿರುವ ಮಹಿಳೆ

ಚಿಕ್ಕೋಡಿ: ಚಲಿಸುತ್ತಿದ್ದ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿರುವ ಘಟನೆ‌ ಆಲೂರು ಕೆ.ಎಂ ಗ್ರಾಮದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೆಚ್ಚಿನ ಚಿಕಿತ್ಸೆಗೆ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ‌ ಮಾಂಗನೂರು ಗ್ರಾಮದ ಪ್ರವೀಣ ಕಾಂಬ್ಳೆ (28) ಎಂಬಾತ ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ ವಂದನಾ ಹಟ್ಟಿಕರ (30) ಎಂಬ ಮಹಿಳೆ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದವ.

ಚಿಕ್ಕೋಡಿ ಉಪವಿಭಾಗದ ಹುಕ್ಕೇರಿ ತಾಲೂಕಿನ‌ ಸಂಕೇಶ್ವರ ಪಟ್ಟಣದಿಂದ ಬಾಡ್ ಗ್ರಾಮಕ್ಕೆ ಬಸ್ ಹೋಗುತ್ತಿತ್ತು. ಈ ವೇಳೆ ಆಲೂರು ಕೆ.ಎಂ ಗ್ರಾಮದ‌ ಸಮೀಪ ಬಸ್ ಗೆ ನುಗ್ಗಿದ ಆರೋಪಿ‌ ಮಹಿಳೆಯ ಹಲ್ಲೆ ನಡೆಸಿದ್ದಲ್ಲದೇ ಜಗಳ ಬಿಡಿಸಲು ಮುಂದಾದ ಪ್ರಯಾಣಿಕರಿಗೆ ಮಹಿಳೆಯ ಸಮೀಪ ಬರದಂತೆ ಬೆದರಿಕೆ ಹಾಕಿದ್ದಾನೆ. ಇತ್ತ ಸ್ಥಳೀಯರ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ಧಾವಿಸಿದ ಸಂಕೇಶ್ವರ್ ಪೊಲೀಸರು ಆರೋಪಿ‌ ಪ್ರವೀಣ ಕಾಂಬ್ಳೆಯನ್ನು ವಶಕ್ಕೆ ಪಡೆದುಕೊಂಡರು. ಈ ಕುರಿತು
ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *