ಬೆಳಗಾವಿ- ನಗರದ ಭೂತರಾಮಟ್ಟಿಯ ರಾಣಿ ಚನ್ನಮ್ಮ ಯುನಿವರ್ಸಿಟಿ ಬಳಿ ಜೆಸಿಬಿ ಸಾಗಿಸುತ್ತಿದ್ದ ಲಾರಿಯೊಂದು ಸುಟ್ಟು ಭಸ್ಮವಾದ ಘಟನೆ ನಡೆದಿದೆ
ಕೊಲ್ಹಾಪೂರದಿಂದ ಬೆಂಗಳೂರು ಕಡೆ ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಕ್ಷಣಾರ್ದದಲ್ಲೇ ಧಗ ಧಗ ಉರಿದು ಲಾರಿಯ ಡಿಸೈಲ್ ಟ್ಯಾಂಕ್ ಸ್ಪೋಟಗೊಂಡು ಲಾರಿ ಸಂಪೂರ್ಣವಾಗಿ ಭಸ್ಮವಾಗಿದೆ
ಲಾರಿಯಲ್ಲಿದ್ದ ಜೆಸಿಬಿ ಕೂಡ ಧ್ವಂಸ ಗೊಂಡಿದೆ ಲಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವ ದನ್ನು ನೋಡಿದ ಸುತ್ತಮುತ್ತಲಿನ ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಮಾಡಿದರು ಆದರೆ ಲಾರಿಯ ಟಾಯರ್ ಹಾಗು ಡಿಸೈಲ್ ಟ್ಯಾಂಕ್ ಸ್ಪೋಟಗೊಂಡಿದ್ದರಿಂದ ಬೆಂಕಿ ಹತೋಟಿಗೆ ಬರಲಿಲ್ಲ ಲಾರಿಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬೆಂಕಿ ಅವಘಡ ದಿಂದ ರಾಷ್ಟ್ರೀಯ ಹೆದ್ದಾರಿಯ ಮೇಲೆ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆ ಯಾಯಿತು ಘಟನಾ ಸ್ಥಳಕ್ಕೆ ಧಾವಿಸಿದ ಕಾಕತಿ ಪೋಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ