ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕು ಅತೀ ವೇಗವಾಗಿ ಹರಡುತ್ತಿದ್ದು,ಇವತ್ತು ಒಂದೇ ದಿನ 114 ಜನ ಸೊಂಕಿತರು ಪತ್ತೆಯಾಗಿದ್ದಾರೆ.
ಸರ್ಕಾರ ರಾಜ್ಯದಲ್ಲಿ ವಿಕೆಂಡ್ ಕರ್ಫ್ಯು ಜಾರಿ ಮಾಡಿದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಂಚ್ಯುರಿ ಬಾರಿಸಿದ್ದು ಬೆಳಗಾವಿ ಜಿಲ್ಲಾಡಳಿತ ವಿಕೆಂಡ್ ಕರ್ಫ್ಯು ಕಟ್ಟು ನಿಟ್ಟಾಗಿ ಜಾರಿ ಮಾಡಲಿದೆ.
ಇಂದು ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಕರ್ಫ್ಯು ಜಾರಿಯಲ್ಲಿದ್ದು ಪೋಲೀಸರು ನಗರದಲ್ಲಿ ಬ್ಯಾರಿಕೇಡ್ ಹಾಕಿ ಟಫ್ ರೂಲ್ಸ್ ಜಾರಿ ಮಾಡಲು ಸಿದ್ದತೆ ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ