Breaking News

ಪಂಚ ರಾಜ್ಯಗಳಲ್ಲಿ ಚುನಾವಣೆ ಘೋಷಣೆ

ಕೊರೊನಾ ಮಹಾಮಾರಿ ನಡುವೆಯೂ 5 ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ದೆಹಲಿ :
ದೇಶದಲ್ಲಿ ಮತ್ತೆ ಕೊರೊನಾ ಮಹಾಮಾರಿಯ ಆರ್ಭಟ ತಾರಕಕ್ಕೇರಿದೆ. ಈ ನಡುವೆ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳಿಗೆ ಸಂಬಂಧಿಸಿ ಚುನಾವಣಾ ದಿನಾಂಕವನ್ನು ನಿಗದಿಗೊಳಿಸಿದೆ.
ದೇಶದ ಅತ್ಯಂತ ದೊಡ್ಡ ರಾಜ್ಯವಾದ
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ದಿನಾಂಕ ಇಂದು ಘೋಷಣೆ ಆಗಿದೆ.

ದೆಹಲಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದಾರೆ.
ಉತ್ತರಪ್ರದೇಶದಲ್ಲಿ 7ಹಂತಗಳಲ್ಲಿ ಮತದಾನ ನಡೆಯಲಿದೆ. ಮಣಿಪುರದಲ್ಲಿ 2ಹಂತಗಳಲ್ಲಿ ಮತದಾನ ನಡೆಯಲಿದೆ ಗೋವಾ, ಪಂಜಾಬ್ ಹಾಗೂ ಉತ್ತರಾಖಂಡ್ ನಲ್ಲಿ ಫೆಬ್ರವರಿ ಹದಿನಾಲ್ಕ ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಯೋಗಿ ಆದಿತ್ಯನಾಥ್ ಅವರ ಆಡಳಿತವಿರುವ ಉತ್ತರಪ್ರದೇಶ 403, ಉತ್ತರಾಖಂಡ್ 70, ಗೋವಾ 40, ಮಣಿಪುರ 60, ಪಂಜಾಬ್ 117 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತದೆ. ಒಟ್ಟು 5 ರಾಜ್ಯಗಳ 690 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು
18.34 ಕೋಟಿ ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ.

ದೇಶದಲ್ಲಿ ಈ ಬಾರಿ ಸುಸೂತ್ರವಾಗಿ ಚುನಾವಣೆ ನಡೆಸಲು ಬಹುಕಷ್ಟದ ಸನ್ನಿವೇಶ ಎದುರಾಗಿದೆ.
ಕೊರೊನಾ ಬಾಧಿಸುತ್ತಿದೆ.
ಕೊರೊನಾ ನಿಯಮಗಳನ್ನು ಪಾಲಿಸಿ ಮತದಾನ ಪ್ರಕ್ರಿಯೆ ನಡೆಸುತ್ತಿದ್ದೇವೆ ಎಂದು ವಿವರಣೆ ನೀಡಿದರು.

ಈ 5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಲಿದೆ.
ಈ ಬಾರಿ ಚುನಾವಣಾ ವೆಚ್ಚವನ್ನು 28 ಲಕ್ಷದಿಂದ 40 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಯಾವುದೇ ಪಕ್ಷಗಳು ಕ್ರಿಮಿನಲ್ ಹಿನ್ನಲೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಆಯಾ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ವಿವರಣೆ ನೀಡಬೇಕಾಗಿದೆ.

ಈ ರಾಜ್ಯಗಳಲ್ಲಿ ಈ ಬಾರಿ ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಸಂಪೂರ್ಣವಾಗಿ ಬ್ರೇಕ್ ಹಾಕಿದೆ. ಪಾದಯಾತ್ರೆ, ರೋಡ್ ಶೋ, ಬೈಕ್ ರ ್ಯಾಲಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಜನಜಂಗುಳಿ ಸೇರುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ.

ಚುನಾವಣಾ ಸಮೀಕ್ಷೆಗಳು ಈ ಪಂಚರಾಜ್ಯಗಳಿಗೆ ಸಂಬಂಧಿಸಿದ
ಈಗಾಗಲೇ ತಮ್ಮ ಭವಿಷ್ಯ ನುಡಿದಿವೆ. ಪಂಜಾಬ್ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದೆ.
ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಾರ್ಟಿ ಅಧಿಕಾರದ ಸನಿಹ ಬರುವ ನಿರೀಕ್ಷೆ ಇದೆ ಎಂದು ಚುನಾವಣಾ ಸಮೀಕ್ಷೆಗಳು ನಡೆದಿವೆ.
ಉಳಿದಂತೆ 4ರಾಜ್ಯಗಳಲ್ಲಿ ಬಿಜೆಪಿ ಆಡಳಿತ
ಮತ್ತೆ ಪುನರಾವರ್ತನೆ ಆಗಲಿದೆ ಎಂದು ಚುನಾವಣಾ ಸಮೀಕ್ಷೆಗಳು ಹೇಳಿವೆ.
ಉತ್ತರಪ್ರದೇಶದಲ್ಲಿ ಕಳೆದ ಬಾರಿ ಬಿಜೆಪಿ ಬಾರಿ ಜಯಭೇರಿ ಗಳಿಸಿತ್ತು. ಆದರೆ ಈ ಬಾರಿ ಕಳೆದ ಬಾರಿಗಿಂತ ಕಡಿಮೆ ಸ್ಥಾನ ಪಡೆಯುವ ಸಾಧ್ಯತೆಯಿದೆ
ಎಂದು ಚುನಾವಣಾ ಭವಿಷ್ಯ ದಿಂದ ಗೊತ್ತಾಗಿದೆ.

ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ, ಗೋವಾ, ಪಂಜಾಬ್ ರಾಜ್ಯಗಳ ಮತದಾನದ ಚುನಾವಣಾ ಫಲಿತಾಂಶ ಮಾರ್ಚ್ 10 ರಂದು ಪ್ರಕಟವಾಗಲಿದೆ.

ಗೋವಾ, ಪಂಜಾಬ್ ಮತ್ತು ಉತ್ತರಖಂಡದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ 7ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27, ಮಾರ್ಚ್ 3, 7 ರಂದು ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದೆ.

ಮಣಿಪುರದಲ್ಲಿ 2ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 27 ರಂದು ಮೊದಲ ಹಂತದ ಮತದಾನ ನಡೆದರೆ ಮಾರ್ಚ್ 3 ರಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ .

ಗೋವಾ, ಉತ್ತರಾಖಂಡ್, ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಒಟ್ಟಾರೆ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೂ ಮುನ್ನ ಈ ಪಂಚ ರಾಜ್ಯಗಳ ಚುನಾವಣೆಯ ಸೆಮಿಫೈನಲ್ ಎಂದೇ ಗುರುತಿಸಲಾಗಿದೆ.
ಈ ಚುನಾವಣೆ ಭವಿಷ್ಯದ ರಾಜಕಾರಣದ ಮಹತ್ವದ ಹೆಜ್ಜೆ ಎಂದು ಪರಿಗಣಿತವಾಗಿದ್ದು ಪ್ರಮುಖವಾಗಿ ಆಡಳಿತರೂಢ ಬಿಜೆಪಿ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಉಳಿದಂತೆ ಪ್ರಧಾನ ಪ್ರತಿಪಕ್ಷ  ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಉತ್ತರಪ್ರದೇಶದಲ್ಲಿ ಮೇಲುಗೈ ಸಾಧಿಸಲು ಮುಂದಾಗಿದೆ. ದೆಹಲಿಯಲ್ಲಿ ಈಗಾಗಲೇ ಆಡಳಿತರೂಢ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲೂ ತನ್ನ ನೆಲೆ ವಿಸ್ತರಿಸಲು ಆ ಪಕ್ಷ ಅಲ್ಲಿ ಅಧಿಕಾರಕ್ಕೇರುವ ನಿಚ್ಚಳ ಸಾಧ್ಯತೆಗಳಿವೆ.
ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಚುನಾವಣೆ ಈ ವರ್ಷವೇ ನಡೆಯಲಿರುವುದರಿಂದ ಈ ಪಂಚ ರಾಜ್ಯಗಳ ಚುನಾವಣೆ ದೇಶದ ರಾಜಕಾರಣದ ದಿಕ್ಸೂಚಿ ಎಂದೇ ಬರೆಯಲಿವೆ ಎನ್ನಲಾಗಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *