ಬೆಳಗಾವಿ:
ಕೌಟುಂಬಿಕ ಕಲಹ ಸಂಬಂಧ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಕೋರ್ಟ್ ಆವರಣದಲ್ಲಿ ನಡೆದಿದೆ.
ಶಿರಸಿ ಮೂಲದ ನಿಖಿಲ್ ಸುರೇಶ ಧಾವಳೆ (೩೨) ಎಂಬಾತನಿಗೆ ಚೂರಿ ಇರಿಯಲಾಗಿದೆ. ಬಲಬದಿ ಬೆನ್ನಿಗೆ ಚೂರಿ ಇರಿಯಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಗಾಯಾಲು ನಿಖಿಲ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಖಿಲ್ ಆರೋಗ್ಯದಲ್ಲಿಚೇತರಿಕೆ ಕಂಡಿದ್ದು, ಯಾವುದೇ ಅಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಕಾರಣ?
ಕೌಟುಂಬಿಕ ಕಲಹದಿಂದ ನಿಖಿಲ್, ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಬೆಳಗಾವಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಗುರುವಾರ ವಿಚಾರಣೆಗಾಗಿ ಕೋರ್ಟ್ಗೆ ಆಗಮಿಸಿದಾಗ ನಿಖಿಲ್ ಪತ್ನಿಯ ಸಹೋದರ ಚೂರಿ ಇರಿದು ಪರಾರಿಯಾಗಿದ್ದಾನೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ