Breaking News

ಜಾಂಬೋಟಿ ಜೇನು”, “ಶಹಾಪುರ ಸೀರೆ” ಬ್ರ್ಯಾಂಡ್….

ಜಾಂಬೋಟಿ ಜೇನು”, “ಶಹಾಪುರ ಸೀರೆ” ಬ್ರ್ಯಾಂಡ್ ಸೃಷ್ಟಿ: ಸಮಗ್ರ ಯೋಜನಾ ವರದಿ ಸಲ್ಲಿಸಲು ಸಚಿವ ಕಾರಜೋಳ ಸೂಚನೆ

ಬೆಳಗಾವಿ, ಜ.25(ಕರ್ನಾಟಕ ವಾರ್ತೆ): ಜಾಂಬೋಟಿ ಜೇನು, ಶಹಾಪುರ ಸೀರೆ, ಮಾವಿನ ಹಪ್ಪಳ(ಆಮ್ ಪಾಪಡ್) ಸೇರಿದಂತೆ ಸ್ಥಳೀಯ ನಾಲ್ಕೈದು ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದರ ಜತೆಗೆ ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಮುಂಬರುವ ಬಜೆಟ್ ನಲ್ಲಿ ಸೇರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚುವರಾದ ಗೋವಿಂದ ಕಾರಜೋಳ ತಿಳಿಸಿದರು.

2022-23ರ ಆಯವ್ಯಯದಲ್ಲಿ ಜಿಲ್ಲೆಗೆ ಸಂಬಂಧಿಸಿದ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ (ಜ.25) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಜಾಂಬೋಟಿ ಜೇನು” ಉತ್ಪನ್ನಕ್ಕೆ ಅಗತ್ಯವಿರುವ ಸಂಸ್ಕರಣ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ ವಿಸ್ತ್ರತ ವರದಿಯನ್ನು ತಯಾರಿಸಿ ಸಲ್ಲಿಸುವಂತೆ ತಿಳಿಸಿದರು.
ಅದೇ ರೀತಿ ಬೆಳಗಾವಿಯ ಶಹಾಪುರ ಸೀರೆಯನ್ನು ಪ್ರೋತ್ಸಾಹಿಸಲು ಅಗತ್ಯವಿರುವ ಯೋಜನಾ ವರದಿ ಸಲ್ಲಿಸಬೇಕು. ಘಟಕ ಸ್ಥಾಪನೆಗೆ ಅಗತ್ಯವಾದ ಅನುದಾನ; ಮಾರುಕಟ್ಟೆ ವಿಸ್ತರಣೆ ಹಾಗೂ ಉದ್ಯೋಗಾವಕಾಶ ಸೃಷ್ಟಿ ಕುರಿತು ಸಮಗ್ರ ಮಾಹಿತಿಯನ್ನು ಒಳಗೊಂಡ ಯೋಜನಾ ವರದಿಯನ್ನು ನಾಲ್ಕೈದು ದಿನಗಳಲ್ಲಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ಕೃಷಿ ಅಥವಾ ತೋಟಗಾರಿಕಾ ಉತ್ಪನ್ನಗಳಿಂದ ಮೌಲ್ಯವರ್ದಿತ ಪದಾರ್ಥಗಳನ್ನು ತಯಾರಿಸಲು ಅನುಕೂಲವಾಗುವಂತಹ ಯೋಜನೆಗಳನ್ನು ರೂಪಿಸಬೇಕು. ಇದರಿಂದ ರೈತರಿಗೆ ಅನುಕೂಲ ಆಗಬೇಕು ಮತ್ತು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವಂತಹ ಹೊಸ ಯೋಜನೆಗಳನ್ನು ಶೀಘ್ರದಲ್ಲಿ ಸಿದ್ಧಪಡಿಸಿ ಸಲ್ಲಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯವಾಗಿ ಲಭ್ಯವಿರುವ ಉತ್ಪನ್ನಗಳನ್ನು ಬಳಸಿಕೊಂಡು ತಯಾರಿಸುವ ಮೌಲ್ಯವರ್ಧಿತ ಪದಾರ್ಥಗಳಿಗೆ ದೇಶದಾದ್ಯಂತ ಮಾರುಕಟ್ಟೆ ಸೃಷ್ಟಿಸಲು ಬಜೆಟ್ ನಲ್ಲಿ ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ತೋಟಗಾರಿಕಾ ಉಪ ನಿರ್ದೇಶಕ ಮುರಗೋಡ ಅವರು
ಜಾಂಬೋಟಿ‌ ಜೇನು ಬ್ರ್ಯಾಂಡ್ ಅಭಿವೃದ್ಧಿಪಡಿಸುವ ಸಾಧ್ಯತೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್…
ನಗರ ಸ್ಥಳೀಯ ಸಂಸ್ಥೆಗಳಿಂದ ಗ್ರಂಥಾಲಯ ಸೇರಿದಂತೆ ವಿವಿಧ ಬಗೆಯ ಬಾಕಿ ಇರುವ ಸೆಸ್ ಗಳನ್ನು ಬಳಸಿಕೊಂಡು ಆರೋಗ್ಯ ಕ್ಷೇತ್ರದ ಸುಧಾರಣೆಗೆ ಬಳಸಬಹುದು.

ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು, ಕೂಡಲೇ ಪಂಚಾಯತಿ, ಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಬಾಕಿ ಸೆಸ್ ಸಂಗ್ರಹಣೆಗೆ ಸಂಬಂಧಿಸಿದಂತೆ ಕೂಡಲೇ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾಗಿ ‌ಇದೀಗ‌ ನೇಮಿಸಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಇಲಾಖೆಗಳ ಸರಣಿ ಸಭೆಗಳನ್ನು ಆಯೋಜಿಸುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸಲಾಗುವುದು ಎಂದರು.

ಪಂಚಾಯತ್ ರಾಜ್, ನೀರಾವರಿ, ಸಮಾಜಕಲ್ಯಾಣ, ಶಿಕ್ಷಣ, ಮಹಾನಗರ ಪಾಲಿಕೆ ಸೇರಿದಂತೆ ಪ್ರಮುಖ ಇಲಾಖೆಗಳ ಸಭೆಗಳನ್ನು ನಿಗದಿಪಡಿಸಿ ವಿಷಯಸೂಚಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ‌ ಸಿಬ್ಬಂದಿ ನೇಮಕ‌ ಮಾಡುವಾಗ ಸಾಧ್ಯವಾದಷ್ಟು ಕಿಯೋನಿಕ್ಸ್ ಮತ್ತಿತರ ಸರಕಾರಿ ಸಂಸ್ಥೆಗಳ ಮೂಲಕ ಮಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಬುಡಾ ಆಯುಕ್ತರಾದ ಪ್ರೀತಂ ನಸಲಾಪುರೆ ಮತ್ತಿತರರು ಉಪಸ್ಥಿತರಿದ್ದರು.
*****

Check Also

ರಿವರ್ ಕ್ರಾಸ್ಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿಯ ಇಬ್ಬರು ಕಮಾಂಡೋಗಳ ಸಾವು

ಬೆಳಗಾವಿ -ರಿವರ್ ಕ್ರಾಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿದ ಪರಿಣಾಮ ಮೃತಪಟ್ಟ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.