ಊಟ ವಸತಿ ಕೊಟ್ಟು..ಟ್ರೇನಿಂಗ್ ಕೊಡ್ತಾರೆ…..

ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು.

ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ ಆಯ್ಕೆ, ಯೋಜನಾ ವರದಿಯ ತಯಾರಿಕೆ ಹಾಗೂ ಸ್ವಯಂ ಉದ್ಯೋಗಕ್ಕೆ ಅಗತ್ಯವಾದ ಎಲ್ಲ ಕೌಶಲ್ಯಗಳನ್ನು ಕಲಿಸಲಾಗುವುದು.

ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ಆಸಕ್ತ ಸಾಹಸಿ ಯುವಕ – ಯುವತಿಯರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡುವ ಮೂಲಕ ಹೆಸರನ್ನು ನೋಂದಾಯಿಸಿ, ಶಿಬಿರದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಸತೀಶ್ ಜಾರಕಿಹೊಳಿ ಫೌಂಡೇಷನ್ ಪರವಾಗಿ ಮಾನವ ಬಂಧುತ್ವ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಸರು ನೋಂದಾಯಿಸಲು ಮೊಬೈಲ್ ಸಂಖ್ಯೆ. 9620711704, 9535372799 ಸಂಪರ್ಕಿಸಬಹುದು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *