ಹಿಜಾಬ್ ಕುರಿತು ನಾಳೆ ನಿರ್ಣಯ

ಬೆಂಗಳೂರು:  ಹಿಜಾಬ್ ವಿವಾದ ರಾಜ್ಯದಲ್ಕಿ ಭುಗಿಲೆದ್ದು ಸಿಎಂ ಬೊಮ್ಮಾಯಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು,ನಾಳೆ ಮಧ್ಯಾಹ್ನ ಹಿಜಾಬ್ ಕುರಿತು ಹೈಕೋರ್ಟ್ ನಿರ್ಣಯ ಹೊರಬೀಳಲಿದೆ.

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ಪೀಠ ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಹಿಜಾಬ್ ಧರಿಸಲು ಅವಕಾಶ ಕಲ್ಪಿಸುವಂತೆ ಕೋರಿರುವ ಅರ್ಜಿದಾರರ ಪರ ದೇವದತ್ ಕಾಮತ್ ವಾದ ಮಂಡಿಸಿದರೆ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು. ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ಇದರಂತೆ ಹಿಜಾಬ್ ಪರ ವಾದ ಮಂಡನೆ ಮಾಡಿದ ಹಿರಿಯ ದೇವದತ್ತ ಕಾಮತ್ ಅವರು, ಲೆಗೆ ಸ್ಕಾರ್ಫ್ ಧರಿಸುವುದು ಇಸ್ಲಾಮಿಕ್ ಧರ್ಮದ ಭಾಗವಾಗಿದೆ. ಪವಿತ್ರ ಕುರಾನ್ ಸೂಚಿಸಿದಂತೆ ಇದು ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿದೆ. ಮದ್ರಾಸ್, ಬಾಂಬೆ ಮತ್ತು ಕೇರಳ ಕೋರ್ಟ್​ಗಳು ಇಂಥಹ ಸಮಸ್ಯೆಯನ್ನು ನಿಭಾಯಿಸುವುದಿಲ್ಲ. ಹಿಜಾಬ್ ಧರಿಸುವುದು ಸಂವಿಧಾನ ಆರ್ಟಿಕಲ್ 19(1)(ಎ) ಮತ್ತು ಆರ್ಟಿಕಲ್ 19(6) ಅಡಿಯಲ್ಲಿ ಬರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಟ್ಟಿದೆ.  ಹಿಜಾಬ್ ಧರಿಸುವುದು ಖಾಸಗಿತನದ ಹಕ್ಕಿಗೆ ಸಂಬಂಧಿಸಿದ ಅಂಶವಾಗಿದೆ. ಇದನ್ನು ಸಂವಿಧಾನ 21ನೇ ವಿಧಿಯಲ್ಲಿ ಈ ಮೂಲಕ ಖಾಸಗಿತನವನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಅಲ್ಲದೆ, ಕೇರಳ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ವಕೀಲರು, ಜಾತ್ಯಾತೀತ ಭಾವನೆ ಒಂದು ಧರ್ಮಕ್ಕೆ ಯಾವುದು ಮೂಲಭೂತ ಎಂದು ಹೇಳಲು ಆಗಲ್ಲ. ವಯಸ್ಕಳಾದ ಬಳಿಕ ಅಪರಿಚಿತರಿಗೆ ಮುಖ ಮತ್ತು ಕೈ ತೋರಿಸುವಂತಿಲ್ಲ ಎಂದು ಖುರಾನ್ ನಲ್ಲಿ ಹೇಳಿದೆ. ಹಾಗಾಗಿ ಅದಕ್ಕೆ ಹಿಜಾಬ್ ಧರಿಸೋದು. ಇದು ಸಹ ನಮ್ಮ ಮೂಲಭೂತ ಹಕ್ಕು. ಮುಖ ಬಿಟ್ಟು ದೇಹ ತೋರಿಸೋದು ನಿಷಿದ್ಧ. ಹಿಜಾಬ್ ಮೂಲಭೂತ ಹಕ್ಕು ಎಂದು ಕೇರಳ ಹೈಕೋರ್ಟ್ ಹೇಳಿದೆ. ಏಕಸದಸ್ಯ ಪೀಠದ ತೀರ್ಪನ್ನು ಎತ್ತಿ ಹಿಡಿದಿದೆ. ಸಿಬಿಎಸ್ ಇ ಸಹ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಹಾಗಾಗಿ ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿ ಎಂದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *