Breaking News

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಅಸ್ತು…

ಬೆಂಗಳೂರು- ಅನೇಕ ವಿವಾದಗಳಿಗೆ ಕಾರಣವಾಗಿದ್ದ ಹಿಜಾಬ್ ಕುರಿತು ಇವತ್ತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಸರ್ಕಾರದ ಆದೇಶಕಾನೂನುಬದ್ಧವಾಗಿದೆ. ಸರ್ಕಾರದ ಡ್ರೆಸ್ ಕೋಡ್ ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಂಗಳವಾರ(ಮಾರ್ಚ್ 15)ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿ ವಿಚಾರಣೆಯನ್ನು ಇಂದು ಮುಕ್ತಾಯಗೊಳಿಸಿದೆ.

ಹಿಜಾಬ್ ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯವಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರವನ್ನು ಸರ್ಕಾರ ಕಡ್ಡಾಯಗೊಳಿಸುವುದು ಕಾರಣಬದ್ಧ ನಿರ್ಬಂಧವಾಗಿದ್ದು ಅದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಿರ್ದಿಷ್ಟ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸುವ ಅಧಿಕಾರ ಸರ್ಕಾರಕ್ಕಿದೆ ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್ ನೀಡಿವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಹಿಜಾಬ್ ವಿವಾದ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿ ನಂತರ ಹಲವು ಜಿಲ್ಲೆಗಳಿಗೆ ಇಡೀ ರಾಜ್ಯಕ್ಕೆ ವ್ಯಾಪಿಸಿ ಹಲವು ನಾಟಕೀಯ ಬೆಳವಣಿಗೆಗಳು, ಗದ್ದಲ, ಲಾಠಿಚಾರ್ಜ್, ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿನಿಯರು ತರಗತಿಗಳಿಗೆ, ಪರೀಕ್ಷೆಗಳಿಗೆ ಬಹಿಷ್ಕರಿಸಿದ ಘಟನೆಗಳು ನಡೆದಿದ್ದವು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *