ಬೆಳಗಾವಿ-ಕುಂದಾನಗರಿಯಲ್ಲಿ ಬೆಳಂ ಬೆಳಗ್ಗೆ ಓರ್ವ ಬಿಲ್ಡರ್ ನ ಮರ್ಡರ್ ಆಗಿದೆ. ಕಾರದ ಪುಡಿ ಎರಚಿ ಬಿಲ್ಡರ್ ಬರ್ಬರ ಹತ್ಯೆ ಮಾಡಲಾಗಿದೆ.
ಬೆಳಗಾವಿ: ಬೆಳಗಾವಿಯಲ್ಲಿ ಬೆಳಂಬೆಳಗ್ಗೆ ನೆತ್ತರು ಹರಿದಿದೆ. ಕಣ್ಣಿಗೆ ಕಾರದ ಪುಡಿ ಎರಚಿ ಓರ್ವ ಬೀಲ್ಡರ್ ನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ನಗರದ ಗುರುಪ್ರಸಾದ್ ಕಾಲೊನಿಯಲ್ಲಿ ಈ ಘಟನೆ ನಡೆದಿದೆ. ಬಿಲ್ಡರ್ ರಾಜು ದೊಡ್ಡಬಣ್ಣವರ (46) ಹತ್ಯೆಯಾದ ದುರ್ದೈವಿ. ಬೆಳಗಾವಿ ತಾಲ್ಲೂಕಿನ ಬಸ್ತವಾಡ ಗ್ರಾಮದ ರಾಜು ಸದ್ಯ ಭವಾನಿ ನಗರದಲ್ಲಿ ವಾಸವಿದ್ದರು.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ನೋಡಲು ಬೆಳಗ್ಗೆ ರಾಜು ತಮ್ಮ ಕಾರಿನಲ್ಲಿ ಹೊರಟಿದ್ದರು. ಆಗ ರಾಜು ಅವರ ಕಾರು ತಡೆದಿರುವ ದುಷ್ಕರ್ಮಿಗಳು ಕಣ್ಣಿಗೆ ಕಾರದ ಪುಡಿ ಎರಚಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ ಕಂಡ ವಾಯುವಿಹಾರ ಮಾಡುತ್ತಿದ್ದ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ತನಿಖೆ ಮುಂದುವರೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				
		
						
					
						
					
						
					