ವಾಯುವ್ಯ ಪದವೀಧರ ಕ್ಷೇತ್ರ,ಕಿರಣಗೆ ಕೈತಪ್ಪಿದ ಕಾಂಗ್ರೆಸ್ ಟಿಕೆಟ್

ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿಲ್ಲೆಯ ಅಥಣಿಯ ಸುನೀಲ ಸಂಕ ಅವರಿಗೆ ಟಿಕೆಟ್ ನೀಡಲಾಗಿದೆ.

ಅವರು ವಕೀಲರೂ ಹೌದು. ಪಕ್ಷದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದಾರೆ.

ಕೆಎಲ್‌ಇ ಸೊಸೈಟಿ ನಿರ್ದೇಶಕ ಡಾ.ವಿ.ಎಸ್. ಸಾಧುನವರ ಅವರ ಪುತ್ರ ಕಿರಣ ಸಾಧುನವರ ಅವರು ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಕೆಲವು ತಿಂಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವನ್ನೂ ನಡೆಸಿದ್ದರು. ಪದವೀಧರರು ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿಯ ಪೋಸ್ಟರ್‌ಗಳನ್ನು ಕೂಡ ಹಾಕುತ್ತಿದ್ದರು. ಅವರಿಗೇ ಟಿಕೆಟ್ ಅಂತಿಮ ಎಂಬ ಮಾತುಗಳು ಕೂಡ ಪಕ್ಷದ ವಲಯದಲ್ಲಿ ಕೇಳಿಬಂದಿದ್ದವು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದೆ. ಸುನೀಲ್ ಸಂಕ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *