*ರಾಜ್ಯದಲ್ಲಿ ಕೋಮು ಸೌಹಾರ್ದತೆ ಕೆಡಿಸಲು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿಂದು- ಮುಸ್ಲೀಂ ಒಂದೇ ತಾಯಿಯ ಮಕ್ಕಳು ಸೌಹಾರ್ದತೆಗೆ ಧಕ್ಕೆ ತರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದ್ರು…..
ಬೆಳಗಾವಿ
ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಸಲಹೆ ನೀಡಿದರು.
ನಗರದಲ್ಲಿ ಸೋಮವಾರ ಬೆಳಗಾವಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದು-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎನ್ನುವುದು ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಪೇಕ್ಷೆಯಾಗಿದೆ. ಅಲ್ಲಲ್ಲಿ ಅಹಿತಕರ ಘಟನೆಗಳು ನಡೆದಿವೆ. ಅವುಗಳಿಗೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲು ಬೆಳಗಾವಿಗೆ ಬಂದಿದ್ದೇವೆ. ಚುನಾವಣೆ ಸಿದ್ಧತೆಗಳ ಕುರಿತಂತೆ ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಸೇರಿ ಚರ್ಚೆಯನ್ನು ನಡೆಸಿ, ಸಲಹೆ ಸೂಚನೆಗಳನ್ನು ನೀಡುತ್ತೇವೆ. ಬೆಳಗಾವಿಯಲ್ಲಿ ನಡೆಯಲಿರುವ ಎರಡು ದಿನಗಳ ಚಿಂತನ ಮಂಥನ ಸಭೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುವುದು. ಇನ್ನು ನಿರಂತರವಾಗಿ ರಾಜ್ಯಾದ್ಯಂತ ಪ್ರವಾಸ ಹಾಗೂ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಬಿಜೆಪಿ ರಾಜಕೀಯದಲ್ಲಿನ ನಾಯಕರ ಭಿನ್ನಾಭಿಪ್ರಾಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ನಾಯಕರನ್ನು ಕರೆದು ಮಾತನಾಡುವ ಪ್ರಯತ್ನ ಮಾಡುವ ಕೆಲಸ ಮಾಡುತ್ತೇವೆ.