ಬೆಳಗಾವಿ: ಬೆಳಗಾವಿಯೂ ಸೇರಿ ರಾಜ್ಯದಲ್ಲಿ ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭಗೊಂಡಿತು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 42 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 24,046 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಮೊದಲ ದಿನ ನಡೆದ ಬಿಜಿನೆಟ್ ಸ್ಟಡೀಸ್ ಪರೀಕ್ಷೆಗೆ 7,609 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಆ ಪೈಕಿ 7,259 ವಿದ್ಯಾರ್ಥಿಗಳು ಹಾಜರಾದರು. 350 ವಿದ್ಯಾರ್ಥಿ ಗೈರಾದರು.
ಜಿಲ್ಲಾ ಖಾಜಾನೆಯಲ್ಲಿ ಪ್ರಶ್ನೆ ಪತ್ರಿಕೆ ಪೂರೈಕೆ ಮಾಡಲು 26 ವಾಹನಗಳನ್ನು ಬಳಸಲಾಯಿತು. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಎಲ್ಲಾ ಪರೀಕ್ಷಾ ಕೊಠಡಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಹಿಜಾಬ್ ತೆಗದಿಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.