ಬೆಳಗಾವಿ-
ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು 2 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲು ನಿರ್ಧರಿಸಿದೆ,
ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ, ಆಗಸ್ಟ್ 29ಕ್ಕೆ ಮತದಾನ ನಡೆಯಲಿದ್ದು ಸೆಪ್ಟಂಬರ್ 1 ರಂದು ಫಲಿತಾಂಶ ಪ್ರಕಟವಾಗಲಿದೆ,
ಬೆಳಗಾವಿ ಜಿಲ್ಲೆಯ
1-ಗೋಕಾಕ-
2 ನಿಪ್ಪಾಣಿ-
3 ಬೈಲಹೊಂಗಲ-
4 ಸಂಕೇಶ್ವರ
5 ಸವದತ್ತಿ
6 ಮೂಡಲಗಿ
7 ಚಿಕ್ಕೋಡಿ
8 ಕುಡಚಿ
9 ಹುಕ್ಕೇರಿ
10 ಸದಲಗಾ
11 ರಾಯಬಾಗ
12 ಖಾನಾಪೂರ
13 ಕೊಣ್ಣೂರ
14 ರಾಮದುರ್ಗ
ನಗರಸಭೆ ಪುರಸಭೆ ಪಟ್ಟಣ ಪಂಚಾತಿಗಳ ಚುನಾವಣೆ ನಡೆಯಲಿದೆ
ಆಗಸ್ಟ್ 10 ರಂದು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬಳಸಲು ಆಯೋಗ ನಿರ್ಧರಿಸಿದೆ. ಚುನಾವಣೆಗೆ ಪೊಲೀಸರು ಸೇರಿದಂತೆ ಸುಮಾರು 40 ಸಾವಿರ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ,
108 ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣಾ ದಿನ ಘೋಷಿಸಿದೆ, 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.
ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಪಾಲಿಕೆಗಳ ಚುನಾವಣೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್ ಆದೇಶದ ಬಳಿಕ ಆ ಪಾಲಿಕೆಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ