ಬೆಳಗಾವಿ-ಅಶ್ವತ್ಥ್ ನಾರಾಯಣ್ – ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಡಿಕೆಶಿ ಹೇಳಿಕೆಗೆ ರಮ್ಯಾ ಪ್ರತಿಕ್ರಿಯೆ ವಿಚಾರವಾಗಿ,ಮಾಜಿ ಸಂಸದೆ ರಮ್ಯಾ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳಕ ಅನುಪಸ್ಥಿತಿಯಲ್ಲಿ ಬೆಳಗಾವಿಯಲ್ಲಿ ಜನ್ಮ ದಿನ ಆಚರಿಸಿ,ಅಭಿಮಾನಿಗಳಿಗೆ,ಸಸಿ,ವಿಧ್ಯಾರ್ಥಿಗಳಿಗೆ ಬುಕ್,ಬ್ಯಾಗ್ ಹಂಚಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ,ರಮ್ಯಾ ಅವರು ಬಹಳ ದಿನಗಳಿಂದ ರಾಜಕಾರಣದಿಂದ ದೂರ ಉಳಿದವರು,ಈಗ ಮತ್ತೆ ಏಕಾಏಕಿ ಬಂದು ಅವರೇಕೆ ಸ್ಟೇಟ್‌ಮೆಂಟ್ ಕೊಡಬೇಕು? ಎಂದುಬೆಳಗಾವಿಯಲ್ಲಿ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಪ್ರಶ್ನೆ ಮಾಡಿದ್ದಾರೆ.
ಎಂ.ಬಿ.ಪಾಟೀಲ್ ಸಾಹೇಬ್ರು ಬಹಳ ದೊಡ್ಡವರು, ಡಿಕೆಶಿ ಸಾಹೇಬ್ರು ಬಹಳ ದೊಡ್ಡವರು,ವೈಯಕ್ತಿಕವಾಗಿ ನಾವು ಅನೇಕ ಸಾರಿ ಯಡಿಯೂರಪ್ಪ ಸಾಹೇಬ್ರ ಭೇಟಿಯಾಗಿದ್ದೇವೆ.ವೈಯಕ್ತಿಕವಾಗಿ ಬೊಮ್ಮಾಯಿ ಸಾಹೇಬರನ್ನು ಭೇಟಿಯಾಗಿದ್ದೇವೆ.ವೈಯಕ್ತಿಕ ಸಂಬಂಧ ಬೇರೆ ರಾಜಕಾರಣ ಸಂಬಂಧ ಬೇರೆಯಾಗಿದೆ ಎಂದು ಚನ್ನರಾಜ್ ಹೇಳಿದ್ರು.
*ಎಂ.ಬಿ.ಪಾಟೀಲ್ ಅಶ್ವತ್ಥ್ ನಾರಾಯಣ್ ಭೇಟಿಯಾಗಿದ್ರಲ್ಲಿ ಏನು ತಪ್ಪಿಲ್ಲ,ಅವರೆಲ್ಲ ಬಹಳ ದೊಡ್ಡವರು, ಭೇಟಿಯಾದ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ.ನನ್ನ ಮಗ ಹಾಗೂ ಅವರ ಮನೆಯಲ್ಲಿರೋರಿಗೆ ಫ್ರೆಂಡ್ಶಿಪ್ ಇದೆ,ನಾವು ಅವರ ಮನೆಗೆ ಊಟಕ್ಕೆ ಹೋಗ್ತೇವೆ, ಅವರು ನಮ್ಮ ಮನೆಗೆ ಊಟಕ್ಕೆ ಬರ್ತಾರೆ ಎಂದಿದ್ದಾರೆ,ಅಶ್ವತ್ಥ್ ನಾರಾಯಣ್ – ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸೋದು ಸಮಂಜಸವಲ್ಲ ಎಂದರು.
ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು,ಮಾಜಿ ಸಂಸದೆ ರಮ್ಯಾ ವಿರುದ್ಧ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ