Breaking News

ಚುನಾವಣಾ ವೇಳಾಪಟ್ಟಿ ಪ್ರಕಟ,ಇಂದಿನಿಂದ ನೀತಿಸಂಹಿತೆ ಜಾರಿ…

ಬೆಳಗಾವಿ-ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬಂದಿರುತ್ತದೆ. ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ಮೇ 12) ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರದ ಹೊಸ ಯೋಜನೆ/ಕಾರ್ಯಕ್ರಮ ಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಲಿದೆ.

ಚುನಾವಣಾ ಪ್ರಚಾರ ಸಭೆ, ವಾಹನ ಬಳಕೆ ಸೇರಿದಂತೆ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು.
ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ಪ್ರಚಾರ ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ವಿಧಾನಸಭೆ/ಲೋಕಸಭೆ ಚುನಾವಣೆ ರೀತಿಯಲ್ಲಿ ಮಾದರಿ ನೀತಿಸಂಹಿತೆ ಇರಲಿದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಪಾಲಿಸಬೇಕು ಎಂದು ಹೇಳಿದರು.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
ನಿಗದಿತ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಈ ಚುನಾವಣಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದರು.

ಚುನಾವಣಾ ವೇಳಾಪಟ್ಟಿ ಪ್ರಕಟ:

ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುತ್ತದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ಜೂನ್ 15 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.

ಮೇ 19 ರಂದು ಅಧಿಸೂಚನೆ ಪ್ರಕಟಿಸಲಾಗುವುದು; ನಾಮಪತ್ರ ಸಲ್ಲಿಕೆಗೆ ಮೇ 26 ಕಡೆಯ ದಿನವಾಗಿರುತ್ತದೆ; ನಾಮಪತ್ರಗಳ ಪರಿಶೀಲನೆ ಮೇ 27 ರಂದು ನಡೆಯಲಿದೆ.
ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನವಾಗಿದ್ದು, ಒಟ್ಟಾರೆ ಚುನಾವಣಾ ಪ್ರಕ್ರಿಯೆಯು ಜೂನ್ 17 ರಂದು ಮುಕ್ತಾಯವಾಗಲಿದೆ.

ಮತಗಟ್ಟೆಗಳ ಕರಡು ಪಟ್ಟಿ ಪ್ರಕಟ:

ಈಗಾಗಲೇ ಜಿಲ್ಲೆಯ ಮತಗಟ್ಟೆಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನಾಲ್ಕು ಉಪ ಮತಗಟ್ಟೆಗಳು ಸೇರಿದಂತೆ ಒಟ್ಟು 82 ಮತಗಟ್ಟೆಗಳನ್ನು ಗುರುತಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ ದಿನಾಂಕ 9-5-2022 ರಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 43,798 ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 13,572 ಮತದಾರರಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಅಭಯ್ ಅವಲಕ್ಕಿ,ರಾಜು ಕೋಪರಿ, ವಿ.ಬಿ.ರೇವಡಿ, ಕೆ.ಜಿ.ಪಾಟೀಲ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *