ಬೆಳಗಾವಿ: ವಿವಿಧ ಸರ್ಕಾರಿ ಕಚೇರಿಗಳಿಗೆ ಬೆಳಗಾವಿಯ ನೂತನ ಡಿಸಿ ನಿತೇಶ ಪಾಟೀಲ ದಿಢೀರ್ ಭೇಟಿ ನೀಡಿದರು.ತಡವಾಗಿ ಕಚೇರಿಗೆ ಆಗಮಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಳಗ್ಗೆ 11.30 ಆದರೂ ಕಚೇರಿಗೆ ಆಗಮಿಸದ ಸಿಬ್ಬಂದಿ ವಿರುದ್ಧ ಡಿಸಿ ನಿತೇಶ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಚೇರಿಗೆ ತಡಮಾಡಿ ಬರುವ ಅಧಿಕಾರಿಗಳ ವಿರುದ್ಧ ಡಿಸಿ ಗರಂ ಆದರು.ಡಿಸಿ ಕಚೇರಿ ಆವರಣದಲ್ಲಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು.
ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.ಮಾಸ್ಕ್ ಹಾಕಿಕೊಳ್ಳದ ಸಿಬ್ಬಂದಿ ವಿರುದ್ಧವೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ತರಾಟೆ ತೆಗೆದುಕೊಂಡರು.
ಬೆಳಗಾವಿ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಅಡಳಿತ ವ್ಯೆವಸ್ಥೆಗೆ ಬಿಸಿ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ