ತಮ್ಮನನ್ನೇ ಚಾಕುವಿನಿಂದ ಇರಿದು ಕೊಂದ ಅಣ್ಣ…

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ತಮ್ಮನ್ನು ಅಣ್ಣ ಕೊಲೆ ಮಾಡಿರುವ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ನಿವಾಸಿ ಮುನಾಫ್ ದೇಸಾಯಿ(24) ದುರ್ದೈವಿ. ರಮಜಾನ್ ದೇಸಾಯಿ(26) ತಮ್ಮನನ್ನೆ ಕೊಲೆ ಮಾಡಿದ ಆರೋಪಿ ಅಣ್ಣ.ನಿನ್ನೆ ತಡರಾತ್ರಿ ಗೋಕಾಕನಲ್ಲಿ ತಮ್ಮ ನಿವಾಸದಲ್ಲಿ ಕೊಲೆಯಾದ ಮುನಾಫ್ ದೇಸಾಯಿ ತನ್ನ ತಂದೆ-ತಾಯಿಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡುತ್ತಿದ್ದನಂತೆ.ಈ ವೇಳೆ ಮಧ್ಯಪ್ರವೇಶಿಸಿ ಆತನ ಸಹೋದರರ ‌ಕೊಲೆ ಆರೋಪಿ ರಮಜಾನ್ ತಂದೆ ತಾಯಿಯನ್ನು ಯಾಕೆ ಬೈಯ್ತಿಯಾ ಇದೀಯಾ ಅಂತಾ ಪ್ರಶ್ನೆ ಮಾಡಿದ್ದಾನೆ.

ಈ ವೇಳೆ ಇಬ್ಬರಲ್ಲೂ ವಾಗ್ವಾದ ತಾರಕಕ್ಕೇರಿ ಜಗಳ ವಿಕೋಪಕ್ಕೆ ತೆರಳಿದ್ದು ಮನೆಯಲ್ಲಿದ್ದ ಚಾಕುವಿನಿಂದ ಮುನಾಫ್ ಹೊಟ್ಟೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ಮುನಾಫ್ ನನ್ನು ಆತನ ಪೋಷಕರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮುನಾಫ್ ಸಾವನ್ನಪ್ಪಿದ್ದಾರೆ.ಸದ್ಯ ಕೊಲೆ ಮಾಡಿದ ಆರೋಪಿ ರಮಜಾನ್ ನನ್ನು ಗೋಕಾಕ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಗೋಕಾಕ ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *