ನಗರೋತ್ಥಾನ ಯೋಜನೆ: ನಗರದ ನಾಲಾ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ- ನಗರೋತ್ಥಾನ ಯೋಜನೆಯಡಿ ನಗರದ ಕ್ಲಬ್ ರಸ್ತೆ ಹಾಗೂ ಕಾಲೇಜು ರಸ್ತೆಯಲ್ಲಿ ಕೈಗೊಳ್ಳಲಾಗಿರುವ ನಾಲಾ ಕಾಮಗಾರಿಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪರಿಶೀಲಿಸಿದರು.
ಕಾಮಗಾರಿ ಸ್ಥಳಗಳಿಗೆ ಬುಧವಾರ(ಜೂ.1) ಭೇಟಿ ನೀಡಿದ ಅವರು, ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಜಾಳಿಗೆಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು.
ನಾಲಾ ಹಾಗೂ ರಸ್ತೆ ಪಕ್ಕದಲ್ಲಿ ಜಾಳಿಗೆ ಅಳವಡಿಸುವುದರಿಂದ ನೀರು ಹರಿದುಹೋಗುತ್ತದೆ. ಅಲ್ಲಿ ಸಂಗ್ರಹವಾಗುವ ಕಸವನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದರಿಂದ ಯಾವುದೇ ರೀತಿಯ ತೊಂದರೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ನಗರೋತ್ಥಾನ ಕಾಮಗಾರಿಯ ಕುರಿತು ಮಾಹಿತಿಯನ್ನು ನೀಡಿದರು.
ಪಾಲಿಕೆಯ ಎಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ ಮತ್ತಿತರರು ಉಪಸ್ಥಿತರಿದ್ದರು.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ