ಬೆಳಗಾವಿ-ಎನ್ ಡಿ ಎ ಮೈತ್ರಿ ಇಂದು ಆದಿವಾಸಿ ಮಹಿಳೆ,ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ದ್ರೌಪದಿ ಮರ್ಮು ಅವರು ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.ಜೊತೆಗೆ ಓಡಿಸಾ ಸರ್ಕಾರದಲ್ಲಿ ಸಚಿವರಾಗಿ ದ್ರೌಪದಿ ಮರ್ಮು ಸೇವೆ ಸಲ್ಲಿಸಿದ್ದಾರೆ.
ವಿರೋಧ ಪಕ್ಷಗಳು ಯಶ್ವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಎನ್ ಡಿ ಎ ಮೈತ್ರಿಕೂಟ ಆದಿವಾಸಿ ಮಹಿಳೆ ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.
ಎನ್ ಡಿ ಎ ಮೈತ್ರಿಕೂಟ ಮುಸ್ಲೀಂ ಅಭ್ಯರ್ಥಿಯನ್ನು ರಾಷ್ಟ್ರಪತಿ ಹುದ್ದೆಗೆ ಕಣಕ್ಕೆ ಇಳಿಸಲಿದೆ ಎನ್ನುವ ಸುದ್ದಿ ದೇಶಾದ್ಯಂತ ಸಾಕಷ್ಟು ಪ್ರಚಾರ ಪಡೆದಿತ್ತು ಆದ್ರೆ ಇವತ್ತು ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡುವ ಮೂಲಕ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದೆ.