ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯ ಜುಡೋ ಕ್ರಿಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅನಕೂಲವಾಗಿದೆ.
ಥಾಯ್ಲೆಂಡ್ ನಲ್ಲಿ ನಡೆಯಲಿರುವ ಜುಡೋ ಚಾಂಪಿಯನ್ ಷಿಪ್ ಗೆ ತೆರಳುತ್ತಿದ್ದ 18 ಜನ ಕ್ರೀಡಾಪಟುಗಳಿಗೆ ಎರಡೇ ದಿನಗಳಲ್ಲಿ ಪಾಸ್ ಪೋರ್ಟ್ ಒದಗಿಸಲು ನೆರವಾದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ.
ಜಿಲ್ಲಾಧಿಕಾರಿಗಳ ನೆರವಿನಿಂದ ಬೆಳಗಾವಿಯ ಕ್ರೀಡಾಶಾಲೆಯ ಎಲ್ಲ 18 ಬಾಲಕರ ತಂಡವು ಅಂತರರಾಷ್ಟ್ರೀಯ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಕೂಲವಾಗಿದೆ.
ಇದಕ್ಕಾಗಿ ಎಲ್ಲರೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿರುತ್ತಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ