ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೋಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ತೀರ್ಪು ನೀಡಿದೆ.
ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ತಿರಸ್ಕರಿಸಿದ ಹೈಕೋರ್ಟ್, ಜೂನ್ 21ರಂದು ತೀರ್ಪು ನೀಡಿದೆ.ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಆದೇಶ ಹೊರಡಿಸಿದ್ದಾರೆ.
2018ರ ಏಪ್ರಿಲ್.ನಲ್ಲಿ ಪ್ರವೀಣ್ ಭಟ್ ಅವರಿಗೆ
ಬೆಳಗಾವಿಯ ಕೋರ್ಟ್ಜೀವಾವಧಿ ಶಿಕ್ಷೆ ವಿಧಿಸಿತ್ತು.2015 ಆ.16ರಂದುಬೆಳಗಾವಿಯ ಕುವೆಂಪು ನಗರದಲ್ಲಿ ನಸುಕಿನ ಜಾವ ತ್ರಿವಳಿ ಕೊಲೆ ಪ್ರಕರಣ ನಡೆದಿತ್ತು. ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು.
24 ಗಂಟೆಯಲ್ಲೇ ಪ್ರವೀಣ್ ಭಟ್ ಎಪಿಎಂಸಿ ಪೊಲೀಸರು ಬಂಧಿಸಿದ್ದರು.
ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣವಾಗಿತ್ತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ