ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನ ಸೌಧ ಕಟ್ಟಡಕ್ಕೆ ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿದರೆ ಉತ್ತರ ಕರ್ನಾಟಕ ಅಭಿವೃದ್ದಿ ಆಗುತ್ತದೆ ಎನ್ನುವುದು ತಪ್ಪು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಕನ್ನಡ ಪರ ಸಂಘಟನೆ ಕಂಗೆಣ್ಣಿಗೆ ಗುರಿಯಾಗಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುವರ್ಣ ವಿಧಾನ ಸೌಧಕ್ಕೆ ಕಚೇರಿಗಳು ಬಂದರೆ ಅಭಿವೃದ್ಧಿಯಾಗುತ್ತದೆ ಎಂದು ಹೇಳಲಾಗದು ಎಂದರು.
ಸಚಿವ ಉಮೇಶ ಕತ್ತಿ ಅವರ
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ನಮ್ಮ ಪಕ್ಷದ ಸಿದ್ಧಾಂತ ಅಖಂಡ ಕರ್ನಾಟಕ. ಉಮೇಶ ಕತ್ತಿ ವಿರುದ್ಧ ಕ್ರಮ ಕೈಗೊಳ್ಳುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಹೇಳಿದರು.
ಮಹದಾಯಿ ನೀರಾವರಿ ಯೋಜನೆ ವಿಚಾರದಲ್ಲಿ ಮೂರು ತಿಂಗಳಲ್ಲಿ ಶುಭ ಸುದ್ದಿ ನೀಡುತ್ತೇವೆ ಎಂದರು.
ಮಹೇಶ ಹೇಳಿಕೆಗೆ ಖಂಡನೆ
ಸುವರ್ಣ ಸೌಧಕ್ಕೆಪ್ರಮುಖ ಕಚೇರಿ ಸ್ಥಳಾಂತರಿಸಿದರೆ ಉತ್ತರ ಕರ್ನಾಟಕ ಅಭಿವೃದ್ದಿ ಆಗುತ್ತದೆ ಎನ್ನುವುದು ತಪ್ಪು ಎಂದು ಬಿಜೆಪಿ ರಾಜ್ಯ ವಕ್ತಾರ ಮಹೇಶ ಹೇಳಿಕೆಯನ್ನು ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.