ಬೆಳಗಾವಿ- ಗ್ಯಾಸ್ ಲಿಕೇಜ್ ಆಗಿ ಓಮಿನಿ ಕಾರೊಂದು ಧಗಧಗ ಬೆಂಕಿಯಲ್ಲಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಸಂಕೇಶ್ವರ ಪಟ್ಟಣದ ಬಸ್ ನಿಲ್ಧಾಣದ ಬಳಿ ಓಮಿನಿ ಕಾರಿನಲ್ಲಿ ಹೊಗೆ ಕಾಣಿಸಿದ ಕಾರಣ ಕಾರು ನಿಲ್ಲಿಸಿ ಹೊರಗೆ ಬರುವಷ್ಟರಲ್ಲಿ ಕಾರಿನಲ್ಲಿ ಬೆಂಕಿ ಹರಡಿ ಕ್ಷಣಾರ್ಧದಲ್ಲಿ ಓಮಿನಿ ಕಾರಿನಲ್ಲಿ ಧಗಧಗ ಹೊತ್ತಿ ಉರಿದಿದೆ.ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ಕೆಲ ಕಾಲ ಇಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾರಿನಲ್ಲಿದ್ದವರು ತಕ್ಷಣ ಹೊರಗೆ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿ ಆಗಿಲ್ಲ.ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ