ಧರ್ಮಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ ಜಿಲ್ಲೆಯಲ್ಲಿ ಹೆಚ್ಚಿದ ಭೀತಿ….
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಮೂರನೇಯ ಚಿರತೆ ಪ್ರತ್ಯಕ್ಷವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರವಾಡಿ ಆಯ್ತು, ಬೆಳಗಾವಿಯ ಗಾಲ್ಫ್ ಮೈದಾನವೂ ಆಯ್ತು ಈಗ ಮೂಡಲಗಿ ತಾಲ್ಲೂಕಿನ ಧರ್ಮಟ್ಟಿಯಲ್ಲೂ ಇಂದು ಚಿರತೆ ಪ್ರತ್ಯಕ್ಷವಾಗಿದೆ.
ಧರ್ಮಟ್ಟಿ ಗ್ರಾಮದಲ್ಲಿ ಮಲಗಿದ ಮೇಕೆಯ ಮೇಲೆ ದಾಳಿ ಮಾಡಿದ ಚಿರತೆ,ಮೇಕೆಯನ್ನು ಭೇಟೆಯಾಡಿದ ದೃಶ್ಯಗಳು ಸಿಸಿಟಿವ್ಹಿಯಲ್ಲಿ ಸೆರೆಯಾಗಿವೆ.
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ.ಈಗ ಮೂಡಲಗಿ,ಚಿಕ್ಕೋಡಿಯಲ್ಲೂ ಚಿರತೆ ಪ್ರತ್ಯಕ್ಷವಾಗಿದ್ದು,ಅರಣ್ಯ ಸಚಿವ ಉಮೇಶ್ ಕತ್ತಿ ಅವರ ತವರು ಜಿಲ್ಲೆಯಲ್ಲೇ ಚಿರತೆ ಭೀತಿ ಎದುರಾಗಿದೆ.
ಧರ್ಮಟ್ಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಕುರಿತು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ