ನವಿಲುತೀರ್ಥ ಭರ್ತಿಗೆ ಕೇವಲ ಮೂರು ಅಡಿ, ಬಾಕಿ
ಬೆಳಗಾವಿ-ಪಶ್ಚಿಮಘಟ್ಟ ಪ್ರದೇಶ ಹಾಗೂ, ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.
ಮಲಪ್ರಭಾ ನದಿ ನೀರಿನ ಒಳಹರಿವು ಪ್ರಮಾಣ ಹೆಚ್ಚಳವಾಗಿದ್ದುಮಲಪ್ರಭಾ ನದಿಗೆ 14,453 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.ರಾಮದುರ್ಗ ತಾಲೂಕಿನ ಮಲಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.ನವಿಲುತೀರ್ಥ ಜಲಾಶಯ ಭರ್ತಿಯಾಗಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.
ನವಿಲು ತೀರ್ಥ ಜಲಾಶಯದ ಗರಿಷ್ಟ ಮಟ್ಟ 2079.50 ಅಡಿ ಇದೆ.ನವಿಲು ತೀರ್ಥ ಜಲಾಶಯದ ಇಂದಿನ ಮಟ್ಟ 2076.40 ಅಡಿ ಇದ್ದು,ಸದ್ಯ ನವಿಲುತೀರ್ಥ ಜಲಾಶಯದಿಂದ 5594 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.ಇಂದು ಸಂಜೆ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ನಿರ್ಧಾರ ಮಾಡಲಾಗಿದ್ದು ನದಿ ಪಾತ್ರದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.