ಗೋಕಾಕನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ಹಾಕಿ ಆರೋಪಿ ಅರೆಸ್ಟ್; ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.
ಖನಗಾಂವ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣನ ಫ್ಲೆಕ್ಸ್ ಹರಿದು ಹಾಕಿದ ಪ್ರಕರಣಕ್ಕೆ ಸಮಂಧಿಸಿದಂತೆ, ಗೋಕಾಕ ತಾಲೂಕಿನ ದೇವಗೌಡನಟ್ಟಿ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಎಂಬಾತನನ್ನು ಬಂಧಿಸಲಾಗಿದೆ. ನೋಡೋದಾದ್ರೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‌ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನ ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು.
ಇತ್ತ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿ ಟಾಯರ್‌ಗೆ ಬೆಂಕಿ ಹಚ್ಚಿ ರಾಯಣ್ಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಗೋಕಾಕ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ತನಿಖೆ ಮುಂದುವರೆದಿದೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.