ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಪ್ರಶಂಸನಾ ಪತ್ರ ನೀಡಿ, ಸನ್ಮಾನಿಸಿದ ಡಿಕೆಶಿ
ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತವಾಗಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ, ಕಾಂಗ್ರೆಸ್ ಪಾದಯಾತ್ರೆ ಅಭಿಯಾನ ಯಶಸ್ಸಿನ ಸವಿನೆನಪಿಗಾಗಿ ಪ್ರಶಂಸನಾ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ವೀಕರಿಸಿದರು.
75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ನಿಂದ ಪಾದಯಾತ್ರೆ ಮಾಡಬೇಕೆಂದು ಎಐಸಿಸಿ ಸೂಚನೆ ಮೇರೆಗೆ ಕಾರ್ಯಕರ್ತರು ಬೃಹತ್ ಪಾದಯಾತ್ರೆ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ, ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆ ಬಗ್ಗೆ ತಿಳಿಸಿದರು. ಈ ಯಶಸ್ಸಿನ ನಡೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, ಪ್ರಶಂಸನಾ ಪತ್ರವನ್ನು ನೀಡಲಾಯಿತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ