ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತರ ಪ್ರೇಮ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು,20 ವರ್ಷದ ಹುಡುಗ, 16 ವರ್ಷದ ಹುಡುಗಿ ಸೇರಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ ಹುಡುಗ,ಹೆತ್ತ ಮಗುವನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿ ಮರಕ್ಕೆ ಹಾಕಿ ಹೋಗಿದ್ದ ಪಾಪಿಗಳ ಕರ್ಮಕಾಂಡ ಈಗ ಬೆಳಕಿಗೆ ಬಂದಿದೆ.ವಾರದ ಬಳಿಕ ಪ್ರಕರಣ ಪತ್ತೆ ಹಚ್ಚಿದ ಖಾನಾಪುರ ಠಾಣೆ ಪೊಲೀಸರು,ಯುವಕನ ಬಂಧಿಸಿ, ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ.
ನೆರಸಾ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ.ಯುವಕನ ಮೇಲೆ ಖಾನಾಪೂರ ಠಾಣೆಯಲ್ಲಿ ಪೋಕ್ಸೋಅಡಿ ಪ್ರಕರಣ ದಾಖಲಾಗಿದೆ.ಖಾನಾಪುರ ತಾಲೂಕಿನ ನೆರಸಾ ಗೌಳಿವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಆಗಸ್ಟ್ 25 ರಂದು ನವಜಾತ ಶಿಶುವನ್ನು ಪ್ಲಾಸ್ಟಿಕ್‌ನಲ್ಲಿ ಮರಕ್ಕೆ ಹಾಕಿ ಹೋಗಿದ್ದ ಪಾಪಿಗಳ ಕೃತ್ಯ
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಮಗು ಅಳುವ ಶಬ್ದ ಕೇಳಿ ಗಮನಿಸಿದ್ದ ಆಶಾ ಕಾರ್ಯಕರ್ತೆ ಸತ್ಯವತಿ ದೇಸಾಯಿ,ತಕ್ಷಣ ಆ್ಯಂಬುಲೆನ್ಸ್ ಕರೆಯಿಸಿ ತಾಲೂಕು ಆಸ್ಪತ್ರೆಗೆ ರವಾನಿಸಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಚಿಕ್ಕಮಕ್ಕಳ ತಜ್ಞ ಡಾ.ಪವನ್ ಪೂಜಾರಿಯಿಂದ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.ಪ್ರಾಥಮಿಕ ಚಿಕಿತ್ಸೆ ನೀಡಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮಗುವನ್ನು ರವಾನೆ ಮಾಡಲಾಗಿದೆ.ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನವಜಾತ ಶಿಶುಗೆ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ