Breaking News

ಬೆಳಗಾವಿಯಲ್ಲಿ, ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು…

*ಬೆಳಗಾವಿಯಲ್ಲಿ ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು..!*

ಬೆಳಗಾವಿ: ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ‌.

ತಾಲೂಕಿನ ಸುಳಗಾ ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಸಾವನ್ನಪ್ಪಿದ್ದು ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ‌.ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರು ತಮ್ಮ ಮನೆಯ ಮೇಲೆ ಸ್ಟಿಲ್ ಶೀಟ್ ಅಳವಡಿಸುವ ಸಂದರ್ಭದಲ್ಲಿ ಮನೆಯ ಮೇಲೆ ಹಾಯ್ದು ಹೋಗಿರುವ ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *