ಬೆಳಗಾವಿ ಜಿಲ್ಲೆಯ ಮಂದಿರಗಳ ಸುಧಾರಣೆಗೆ ಕೋಟಿ,ಕೋಟಿ ಅನುದಾನ…!!

*ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ*

– ಸವದತ್ತಿ ಯಲ್ಲಮ್ಮ ದೇವಸ್ಥಾನ, ದತ್ತಾತ್ರೇಯಸ್ವಾಮಿ ದೇವಾಲಯ ಗಾಣಗಾಪುರಕ್ಕೆ ಮತ್ತು ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ
– ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ 3 ಕೋಟಿ ಅನುದಾನ ಬಿಡುಗಡೆ

*ಬೆಂಗಳೂರು ಸೆಪ್ಟೆಂಬರ್‌ 06*: ರಾಜ್ಯದ ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳು ಹಾಗೂ ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠದ ವಿಶೇಷ ಅನುದಾನವನ್ನು ಮುಜರಾಯಿ ಇಲಾಖೆಯ ವತಿಯಿಂದ ಬಿಡುಗಡೆಗೊಳಿಸಲು ಅಧಿಕೃತ ಆದೇಶ ಹೊರಡಿಲಾಗಿದೆ ಎಂದು *ಮಾನ್ಯ ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ*.

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು 2021 ರ ಡಿಸೆಂಬರ್‌ ನಲ್ಲಿ ಬೆಳಗಾವಿಯ ಅಧಿವೇಶನದ ಸಂಧರ್ಭದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ತಗೆದುಕೊಂಡ ನಿರ್ಧಾರದಂತೆ ಈ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಪ್ರಮುಖ ದೇವಸ್ಥಾನಗಳಾದ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನ, ಕಲಬುರ್ಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯಸ್ವಾಮಿ ದೇವಾಲಯ, ಉತ್ತರ ಕರ್ನಾಟಕ ಭಾಗದ ಅತಿಹೆಚ್ಚು ಭಕ್ತರನ್ನು ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ ಮತ್ತು ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದ್ದೇವೆ.

ಈ ಅನುದಾನವನ್ನು ಬಳಸಿಕೊಂಡು ದೇವಸ್ಥಾನಗಳನ್ನು ಅಭಿವೃದ್ದಿಗೊಳಿಸಲು ಅಧಿಕಾರಿಗಳಿಗೆ ಹಾಗೂ ದೇವಸ್ಥಾನಗಳ ವ್ಯವಸ್ಥಾಪನ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾನ್ಯ ಸಚಿವರು ತಿಳಿಸಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *