Home / Breaking News / ಸಾಹುಕಾರ್ ಮನೆಗೆ ಭೇಟಿ ನೀಡಿದ ಸಾಹುಕಾರ್…!!!

ಸಾಹುಕಾರ್ ಮನೆಗೆ ಭೇಟಿ ನೀಡಿದ ಸಾಹುಕಾರ್…!!!

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, ಪುತ್ರ ನಿಖಿಲ ಕತ್ತಿ ಸೇರಿದಂತೆ ಕುಟುಂಬದವರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಉಮೇಶ ಕತ್ತಿ ಕರ್ನಾಟಕ ಕಂಡ ವರ್ಣರಂಜಿತ ರಾಜಕಾರಣಿ. ಸದಾ ಲವಲವಿಕೆಯಿಂದ ಇರುತ್ತಿದ್ದ ಉಮೇಶ ಕತ್ತಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಮ್ಮದೇಯಾದ ಕೊಡುಗೆ ನೀಡಿದ್ದರು. ಅಭಿವೃದ್ಧಿ ವಿಷಯಕ್ಕೆ ಬಂದಾಗ ಸದಾ ನಮ್ಮ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಬಗ್ಗೆಯೇ ಹೆಚ್ಚು ಯೋಚಿಸುತ್ತಿದ್ದರು. ಸತತ 4 ದಶಕಗಳಿಂದ ರಾಜಕೀಯ ಹಾಗೂ ಸಹಕಾರ ವಲಯದಲ್ಲಿ ಗುರುತಿಸಿಕೊಂಡಿದ್ದ ಕತ್ತಿ ಅವರ ಅಕಾಲಿಕ ನಿಧನದಿಂದ ನನಗೆ ದಿಗ್ಭ್ರಮೆಯಾದಂತಾಗಿದೆ. ಮಂಗಳವಾರ ರಾತ್ರಿ ಹೃದಯಾಘಾತಕ್ಕೆ ಒಳಗಾದ ಸಂದರ್ಭದಲ್ಲಿ ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆಯನ್ನು ಕೂಡ ಮಾಡಿಕೊಂಡಿದ್ದೆ. ಆದರೆ ವಿಧಿಯ ಆಟ ಬೇರೆಯೇ ಆಗಿತ್ತು. ಇನ್ನೂ ಅವರಿಂದ ಇನ್ನೂ ಸಾಕಷ್ಟು ಜನಸೇವೆಯನ್ನು ನಾವು ನಿರೀಕ್ಷೆ ಮಾಡಿದ್ದೇವು. ಅವರು ಅಗಲಿರುವುದು ನಮ್ಮೆಲ್ಲರ ದುರ್ದೈವ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಪ್ರಖ್ಯಾತ ಉದ್ಯಮಿ ಜಯಶೀಲ ಶೆಟ್ಟಿ, ಲೆಕ್ಕಪರಿಶೋಧಕ ಸೈದಪ್ಪ ಗದಾಡಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

*

Check Also

ಬೆಳಗಾವಿಯ ಬಿಜೆಪಿ ನಗರಸೇವಕ ಅಭಿಜಿತ್ ಜವಳಕರ್ ಬಂಧನ..

ಬೆಳಗಾವಿ- ಮೋಬೈಲ್ ಟಾವರ್ ಅಳವಡಿಕೆಗೆ ಸಂಭಂಧಿಸಿದಂತೆ ಇತ್ತೀಚಗೆ ನಗರಸೇವಕ ಅಭಿಜಿತ್ ಜವಳಕರ್ ಮತ್ತು ರಮೇಶ್ ಪಾಟೀಲ ನಡುವೆ ವಾಗ್ವಾದ ನಡೆದು …

Leave a Reply

Your email address will not be published. Required fields are marked *