CAA,NRC ವಿರೋಧಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

 

ಬೆಳಗಾವಿ
ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಬೆಳಗಾವಿ ವಿವಿಧ ಸಂಘಟನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಒಂದು ಜಾತಿ, ಧರ್ಮವನ್ನು ಹೊರಗಿಟ್ಟು ಕಾನೂನು ರೂಪಿಸಿರುವ ಕೇಂದ್ರ ನಡೆ ದೇಶಕ್ಕೆ ಆತಂಕ ವಿಷಯ, ಪೌರತ್ವ ಕಾಯ್ದೆ ವಿರೋಧಿಸಿ ಸೋಮವಾರ ಕರ್ನಾಟಕ
ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಡಳಿತ ಮೂಲಕ ಕೇಂದ್ರ ಸರಕಾರ ಮನವಿ ರವಾನಿಸಲಾಯಿತು.

ದೇಶದಲ್ಲಿ ಆರ್ಥಿಕ ಹಿಂಜರಿಕೆಯಿಂದ ಮತ್ತಷ್ಟು ಸಮಸ್ಯೆಯಾಗುತ್ತಿದೆ ಇದಕ್ಕೆ ಕೇಂದ್ರ ಸರಕಾರ ಹೊಣೆಯಾಗಿದೆ‌ ಇದರಿಂದ ದೇಶ ಹಿನ್ನಡೆ ಸಾಧಿಸುತ್ತಿದೆ.

ದೇಶದಲ್ಲಿ ಎಲ್ಲ ಧರ್ಮದ
ಜೀವಿಸುವ ಅವಕಾಶವನ್ನು ಡಾ.ಬಿ.ಆರ್‌.ಅಂಬೇಡ್ಕರ ಸಂವಿಧಾನದಲ್ಲಿ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಸರ್ವ ಧರ್ಮವನ್ನು ಗಮನದಲ್ಲಿ ಇಟ್ಟುಕೊಂಡು ಯೋಜನೆಗಳನ್ನು ರೂಪಿಸಿಬೇಕು. ಆದರೆ ಒಂದು ಧರ್ಮವನ್ನು ಹೊರಗಿಟ್ಟು ಪೌರತ್ವ ಕಾಯ್ದೆ ಜಾರಿಗೆ ತಂದಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ. ಇದರಿಂದ ಕೆವಲ ಮುಸ್ಲಿಂ ಸಮುದಾಯಕ್ಕೆ ಅಲ್ಲದೆ ಇತರರಿಗೂ ದುಷ್ಟರಿಣಾಮವಾಗಿದೆ. ಶೇ.80% ರಷ್ಟು ದಲಿತ ಸಮುದಾಯದವರಿಗೆ ದಾಖಲೆಗಳಿಲ್ಲ. ಪೌರತ್ವ ಕಾಯ್ದೆಯ ಬಗ್ಗೆ ತಜ್ಞರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಆದ ಕಾರಣ ತಕ್ಷಣ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆಯನ್ನು ವಾಪಾಸ್ ಪಡೆಯುವಂತೆ ಮನವಿ ಮೂಲಕ ಒತ್ತಾಯಿಸಿದರು.

ಅಮೀನಸಾಬ ಜಾತಗಾರ, ಸುಂದ್ರವ್ವಾ ಕಟ್ಟಿಮನಿ, ಸಯಿದಾ ಸನದಿ, ಫಾತಿಮಾ ಶೇಖ, ಶಶಿ ಸಾಳಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *