ಬೊಮ್ಮಾಯಿಯವರ ಸರಕಾರದಿಂದ ಸಾಮಾಜಿಕ ನ್ಯಾಯದ
ದಿಗ್ವಿಜಯ ಯಾತ್ರೆ: ನಳಿನ್‍ಕುಮಾರ್ ಕಟೀಲ್ ಕೃತಜ್ಞತೆ
ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ಮೂಲಕ ಕಾಮನ್ ಮ್ಯಾನ್ ಮುಖ್ಯಮಂತ್ರಿ ಎಂದೇ ಜನಮೆಚ್ಚುಗೆ ಪಡೆದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರಕಾರವು ಬಡವರ ಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸಂತಸ ಸೂಚಿಸಿದ್ದಾರೆ.
ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರಕಾರ ಮುಂದುವರಿಸಿದೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು ಎಂದು ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಈ ನೌಕರರು ಈಗ ರೂ. 17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಇದರಿಂದ ಸುದೀರ್ಘ ಕಾಲದಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ನಿರ್ಧಾರಕ್ಕಾಗಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರನ್ನು ಮತ್ತೊಮ್ಮೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ.