Breaking News
Home / Breaking News / ಪರಿಹಾರ ಕೊಡಿ ಎಂದು,ಡಿಸಿ ಕಚೇರಿಗೆ ಬಂದ್ರು…!!

ಪರಿಹಾರ ಕೊಡಿ ಎಂದು,ಡಿಸಿ ಕಚೇರಿಗೆ ಬಂದ್ರು…!!

ಬೆಳಗಾವಿ
ನಿರಂತರ ಮಳೆಯಿಂದ ಸೋಯಾಬಿನ್, ಆಲೂಗಡ್ಡೆ ಹಾಗೂ ಇನ್ನಿತರ ಬೆಳೆ ನಾಶಕ್ಕೆ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ ತಾಲೂಕಿನಲ್ಲಿ ಈ ಹಿಂದೆಯಾದ ನಿರಂತರ ಮಳೆಗೆ ಸೋಯಾಬಿನ್ ಹಾಗೂ ಆಲೂಗಡ್ಡೆ ಬೆಳೆ ಹಾನಿಯಾಗಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಂತೆ ಈ ಹಿಂದೆ ಲಾಕ್ ಡೌನ್ ಸಮಯದಲ್ಲಿ ಕ್ಯಾಬಿಜ ಹಾಗೂ ಇನ್ನಿತರ ತರಕಾರಿ ಬೆಳೆಗಳು ಹೊಲದಲ್ಲಿಯೇ ಕೊಳೆತು‌ ಹೊಗಿದ್ದು ಸರಕಾರ ಮಾತ್ರ ಪರಿಹಾರ ನೀಡಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬೆಳೆ ಹಾನಿಯಲ್ಲಿ ಕಟ್ಟ ಕಡೆಯ ರೈತನಿಗೆ ಪರಿಹಾರ ಕೊಡಿಸುವ ಜವಾಬ್ದಾರಿ ಜಿಲ್ಲಾಡಳಿತ್ತದ್ದು, ಬೆಳೆ ಹಾನಿ ಪರಿಹಾರ ಬಾರದೆ ಇರುವುದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಅಪ್ಪಾಸಾಹೇಬ ದೇಸಾಯಿ, ಮಾರುತಿ ಕಡೆಮನಿ, ರಾಜು ಕಾಗಣಿಕರ, ರಾಮಚಂದ್ರ ಫಡಕೆ, ಚಂದ್ರು ರಾಜಾಯಿ, ದುಂಡಪ್ಪ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ಲಕ್ಷ..ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ರು….!!

ಬೆಳಗಾವಿ : ಖಾತಾ ವರ್ಗಾವಣೆಗೆ ಹಣ ಬೇಡಿಕೆಯಿಟ್ಟಿದ್ದ ತಹಶಿಲ್ದಾರರ ಹಾಗೂ ಕಚೇರಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ …

Leave a Reply

Your email address will not be published. Required fields are marked *