ಬೆಳಗಾವಿ-ಬೆಳಗಾವಿಯಲ್ಲಿ ಐವರು ಪಿಎಫ್ಐ ಮುಖಂಡರನ್ಬು ಬೆಳಗಾವಿ ಪೊಲೀಸರು ವಶಕ್ಜೆ ಪಡೆದು ವಿಚಾರಣೆ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ 4 ಗಂಟೆಗೆ ಬೆಳಗಾವಿಯ ಹಿರಿಯ ಪೋಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ದಾಳಿ ನಡೆಸಿದ್ದಾರೆ.
ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಐವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಎಸಿಪಿ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ,
ಮಾರ್ಕೆಟ್, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆ ಸಿಪಿಐಗಳ ಸಾಥ್ ನೀಡಿದ್ದಾರೆ.ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆಯಲಾಗಿರುವ ಪಿಎಫ್ ಐ ಮುಖಂಡರ ವಿಚಾರಣೆ ನಡೆಯುತ್ತಿದೆ.ಇತ್ತೀಚೆಗೆ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ್ದ ಪಿಎಫ್ಐ ಕಾರ್ಯಕರ್ತರು,ರಾಷ್ಟ್ರೀಯ ಹೆದ್ದಾರಿ ನಾಲ್ಕು ತಡೆದು ಪ್ರತಿಭಟನೆ ನಡೆಸಿದ್ದರು.ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ ಕಟಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
