ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ.ಮಳೆಯಿಂದ ಮನೆಗೋಡೆ ಕುಸಿದು ತಾಯಿ ಮಗು ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವಾ ಬಾಗಿಲದ(40), ಮಗ ಪ್ರಜ್ವಲ್ ಬಾಗಿಲದ(5)ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಬ್ಬರು ಗಾಯಗೊಂಡಿದ್ದು ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿರಂತರ ಮಳೆಯಿಂದಾಗಿ ಮಣ್ಣಿನ ಗೋಡೆಯಲ್ಲಿ ನೀರಿಳಿದು ಗೋಡೆ ಕುಸಿದು ಈ ಘಟನೆ ನಡೆದಿದೆ.ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ