ಬೆಳಗಾವಿ,-ಕೋವಿಡ್-೧೯ ಹಿನ್ನೆಲೆಯಲ್ಲಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಖರೀದಿಸಲು ಕಾರ್ಮಿಕ ಇಲಾಖೆಯ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಗೆ ಎಂಟು ಲಕ್ಷ ರೂಪಾಯಿ ಚೆಕ್ ನೀಡಲಾಯಿತು.
ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರ ಸಮ್ಮುಖದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ (ಮಾ.೩೧) ರೆಡ್ ಕ್ರಾಸ್ ಸಂಸ್ಥೆಗೆ ಚೆಕ್ ನೀಡಲಾಯಿತು.
ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು.
ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಶಾಖೆಯ ಚೇರಮನ್ ಅಶೋಕ ಬಾದಾಮಿ, ಕಾರ್ಯದರ್ಶಿ ಡಾ.ಡಿ.ಎನ್.ಮಿಸಾಳೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ತರನ್ನುಮ್, ಮಲ್ಲಿಕಾರ್ಜುನ ಜೋಗೂರ, ಕಾರ್ಮಿಕ ನಿರೀಕ್ಷಕ ಅನಿಲ್ ಬಗಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ