ಬೆಳಗಾವಿ-ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ, ಪ್ರಮುಖ ಆರೋಪಿಗೆ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು.
ಬೆಳಗಾವಿ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳಿಂದ ಆರೋಪಿ ಅರೆಸ್ಟ್ ಆಗಿದ್ದಾನೆ.ಮೂಡಲಗಿ ತಾಲೂಕಿನ ಸಂಜೀವ ಭಂಡಾರಿಯನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.2021 ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪದ ಮೇಲೆ ಜಾಮೀನು ಪಡೆದ ಆರೋಪಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ.
ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಅಕ್ರಮದಲ್ಲೂ ಪ್ರಮುಖ ಆರೋಪಿ ಆಗಿದ್ದ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ, ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ