Breaking News

ಹಿಂಡಲಗಾ ಜೈಲಿನಿಂದ ಬಿಡುಗಡೆ ಆದ್ಮೇಲೆ ಮತ್ತೆ ಅರೆಸ್ಟ್ ಆದ. ಆರೋಪಿ….!!!

ಬೆಳಗಾವಿ-ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ, ಪ್ರಮುಖ ಆರೋಪಿಗೆ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು.

ಬೆಳಗಾವಿ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳಿಂದ ಆರೋಪಿ ಅರೆಸ್ಟ್ ಆಗಿದ್ದಾನೆ.ಮೂಡಲಗಿ ತಾಲೂಕಿನ ಸಂಜೀವ ಭಂಡಾರಿಯನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.2021 ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪದ ಮೇಲೆ ಜಾಮೀನು ಪಡೆದ ಆರೋಪಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ.

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಅಕ್ರಮದಲ್ಲೂ ಪ್ರಮುಖ ಆರೋಪಿ ಆಗಿದ್ದ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ, ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ‌.

Check Also

ಬೆಳಗಾವಿ ಜಿಲ್ಲೆಯ ವೀರ ಯೋಧ ನಿಧನ

ಮೂಡಲಗಿ:ಕಲ್ಲೋಳಿ ಪಟ್ಟಣದ ವೀರ ಯೋಧ ಶ್ರೀ ಪ್ರವೀಣ್ ಸುಭಾಸ್ ಖಾನಗೌಡ್ರ (24) ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ …

Leave a Reply

Your email address will not be published. Required fields are marked *