Breaking News

ಸೆಬ್ಸಿಡಿ ರಿಲೀಸ್ ಮಾಡಲು 50 ಸಾವಿರ ಲಂಚ ಕೇಳಿದ್ದರು…!!

ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸೇರಿ ಇಬ್ಬರು ಲೋಕಾಯುಕ್ತರ ಬಲೆಗೆ

ಬೆಳಗಾವಿ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ರಾತ್ರಿ ಬೀಸಿದ ಬಲೆಗೆ ಬೆಳಗಾವಿ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ( ಡಿಐಸಿ) ಕಚೇರಿಯ ಜಂಟಿ ನಿರ್ದೇಶಕ ಸೇರಿ ಇಬ್ಬರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ.

ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್. ಮತ್ತು ಸಹಾಯಕ ನಿರ್ದೇಶಕ ಪದ್ಮಕಾಂತ ಜಿ. ಎಂಬುವರೇ ಲೋಕಾಯುಕ್ತರ ಬಲೆಗೆ ಬಿದ್ದವರು. ಈ ಇಬ್ಬರೂ ಅಧಿಕಾರಿಗಳು ಸಬ್ಸಿಡಿ ಆದೇಶ ನೀಡಲು ಫಲಾನುಭವಿಯಿಂದ ₹ ೫೦ ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಬೆಳಗಾವಿಯ ಗಿರೀಶ ಕುಲಕರ್ಣಿ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗುಡಿ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಬಲೆಗೆ ಕೆಡವಿದರು. ಈ ಇಬ್ಬರೂ ಅಧಿಕಾರಿಗಳನ್ನು ಬಂಧಿಸಿ, ಅವರಿಂದ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ಮುಂದುವರೆದಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *