Breaking News
Home / Breaking News / ಆನಂದ ಮಾಮನಿ ಇನ್ನಿಲ್ಲ…..

ಆನಂದ ಮಾಮನಿ ಇನ್ನಿಲ್ಲ…..

ಬೆಳಗಾವಿ- ವಿಧಾನಸಭೆಯ ಡೆಪ್ತುಟಿ ಸ್ಪೀಕರ್ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರು ಶನಿವಾರ ಮದ್ಯರಾತ್ರಿ ಮನಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆನಂದ ಮಾಮನಿ ಶನಿವಾರ ರಾತ್ರಿ ನಿಧನರಾಗಿದ್ದಾರೆ‌.

ಮೃದು ಸ್ವಭಾವದ ಮೂಲಕ,ಅಪಾರ ಜನಮೆಚ್ಚುಗೆ ಗಳಿಸಿದ್ದ ಅವರು,ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಭಿವೃದ್ದಿಯ ಹೊಳೆ ಹರಿಸಿದ್ದರು.ಕಳೆದ ಒಂದು ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು,ವಿಡಿಯೋ ಮಾಡಿ,ನನ್ನ ಆರೋಗ್ಯ ಸುಧಾರಿಸುತ್ತದೆ ನಾನು ಮತ್ತೆ ಮರಳಿ ಸವದತ್ತಿಗೆ ಬರುತ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ಮೂಡಿಸಿದ್ದ ಆನಂದ ಮಾಮನಿ ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.

ಆನಂದ ಮಾಮನಿ ಅವರ ಪಾರ್ಥೀವ ಶರೀರ ಭಾನುವಾರ ಬೆಳಗ್ಗೆ ಸವದತ್ತಿಗೆ ಬರಲಿದ್ದು ಸವದತ್ತಿಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ.ಆನಂದ ಮಾಮನಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *