Breaking News

ಬೆಳಗಾವಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು…

ಬೆಳಗಾವಿ-ಕುಡಿಯುವ ನೀರಿನ ಪೈಪ್ ಒಡೆದು ಅದರಲ್ಲಿ ಚರಂಡಿ ನೀರು ಮಿಕ್ಸ್ ಆಗಿ ಅವಘಡ ಸಂಭವಿಸಿದೆ.ಇದೇಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಓರ್ವ ವೃದ್ಧ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಒಟ್ಟು 94 ಜನರು ಅಸ್ವಸ್ಥಗೊಂಡಿದ್ದಾರೆ.ನಾಲ್ವರ ಸ್ಥಿತಿ ಗಂಭೀರಾಗಿದೆ.ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮುದೇನೂರು ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಅವಘಡ ಸಂಭವಿಸಿದೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಹಲವಾರು ಜನ ಆಸ್ಪತ್ರೆಗೆ ಸೇರಿದ್ದಾರೆ.ಮುದೇನೂರು ಗ್ರಾಮದ ನಿವಾಸಿ 70 ವರ್ಷದ ಶಿವಪ್ಪ ಮೃತಪಟ್ಟಿದ್ದಾರೆ.ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಶಿವಪ್ಪರನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು,ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.ಬಾಗಲಕೋಟ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವೃದ್ಧ ಸಾವನ್ನೊಪ್ಪಿದ ಘಟನೆ ನಡೆದಿದೆ.

ಕಳೆದ 4 ದಿನಗಳ ಅಂತರದಲ್ಲಿ ಹಂತ ಹಂತವಾಗಿ ಒಟ್ಟು 94 ಜನ ಅಸ್ವಸ್ಥಗೊಂಡಿದ್ದಾರೆ.ಕುಡಿಯುವ ನೀರು ಪೂರೈಕೆಯ ಪೈಪ್ ಅಲ್ಲಲ್ಲಿ ಒಡೆದು ಚರಂಡಿ ನೀರು ಸೇರ್ಪಡೆಯಾಗಿದೆ.ಮುದೇನೂರು ಗ್ರಾಮದ ಬಸವಣ್ಣ ದೇವರ ಗುಡಿ ಓಣಿ, ಲಕ್ಕಮ್ಮದೇವಿ ಗುಡಿ ಓಣಿ, ಬೀರದೇವರ ಗುಡಿ ಓಣಿಯ 94 ನಿವಾಸಿಗಳು ಅಸ್ವಸ್ಥಗೊಂಡಿದ್ದಾರೆ.44 ಪುರುಷರು, 30 ಮಹಿಳೆಯರು, 12 ಬಾಲಕರು, 8 ಬಾಲಕಿಯರು ಅಸ್ವಸ್ಥರಾದ ಮಾಹಿತಿ ಸಿಕ್ಕಿದೆ.ಅಸ್ವಸ್ಥರಿಗೆ ಬಟಕುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ, ರಾಮದುರ್ಗ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಂತಿ ಭೇದಿ ಸಮಸ್ಯೆಯಿಂದ ಅವರು ಬಳಲುತ್ತಿದ್ದು,ನಿನ್ನೆ ಮುದೇನೂರು ಗ್ರಾಮಕ್ಕೆ‌ ಭೇಟಿ ನೀಡಿದ್ದ ರಾಮದುರ್ಗ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ,ಅಸ್ವಸ್ಥಗೊಂಡ ಜನರಿಗೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.

Check Also

ಬೆಳಗಾವಿ ಜಿಲ್ಲಾಧಿಕಾರಿಗಳ ಇದೊಂದು ಕಾರ್ಯ ಶ್ಲಾಘನೀಯ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಮಾಡಿರುವ ಇದೊಂದು ಕಾರ್ಯ ಶ್ಲಾಘನೀಯ ಅದು ಏನಂದ್ರೆ ಸುವರ್ಣಸೌಧಕ್ಕೆ ಪಾಸ್ ಪಡೆದು …

Leave a Reply

Your email address will not be published. Required fields are marked *