Breaking News

ದೆಹಲಿಗೆ ಹೋಗಿ ಬಂದವರ ೬೨ ಜನರಲ್ಲಿ ರೋಗದ ಲಕ್ಷಣಗಳು ಕಂಡುಬಂದಿಲ್ಲ.ಡಿಸಿ

ಬೆಳಗಾವಿ,- ನವದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಒಟ್ಟು ೬೨ ಜನರಲ್ಲಿ ಯಾರಿಗೂ ರೋಗದ ಲಕ್ಷಣಗಳು ಕಂಡುಬಂದಿಲ್ಲ. ೪೨ ಜನರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ೩೩ ಜನರ ಗಂಟಲು ದ್ರವದ ‌ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ತಬ್ಲಿಘಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರು ಮತ್ತೆ ಯಾರಾದರೂ ಇದ್ದಲ್ಲಿ ತಕ್ಷಣವೇ ಸ್ವಯಂ ಪ್ರೇರಣೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಂಡು ಜಿಲ್ಲಾಡಳಿಕ್ಕೆ ಮಾಹಿತಿಯನ್ನು ನೀಡಬೇಕು.

ಮರ್ಕಜ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡೂ ಮಾಹಿತಿಯನ್ನು ಮುಚ್ಚಿಟ್ಟರೆ ಅಂತಹವರ ವಿರುದ್ಧ ಸಮಾಜದ ಆರೋಗ್ಯದ ದೃಷ್ಟಿಯಿಂದ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರ ಬಗ್ಗೆ ಸಾರ್ವಜನಿಕರು ಕೂಡ ಆಯಾ ತಾಲ್ಲೂಕಿನ ತಹಶೀಲ್ದಾರರು ಅಥವಾ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿಯನ್ನು ನೀಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ೬೨ ಜನರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ಯಾರಲ್ಲೂ ಸೋಂಕು ಕಂಡುಬಂದಿರುವುದಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗದೇ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು.
ಅನಾವಶ್ಯಕವಾಗಿ ಜನರು ರಸ್ತೆಗೆ ಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಎಚ್ಚರಿಕೆ ನೀಡಿದ್ದಾರೆ.
***

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *