ಬೆಂಗಳೂರು-
ಡಿಸೆಂಬರ್ 19 ರಿಂದ 29ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕರೆಯಲಾದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ, ಈ ಬಾರಿ ಬೆಳಗಾವಿಯಲ್ಲಿ 10 ದಿನಗಳ ಕಾಲ ಚಳಿಗಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಈ ಬಾರಿ ಯಾವುದೇ ಗೊಂದಲ ಉಂಟಾಗದಂತೆ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧಾರವಾಡದಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಅಧಿವೇಶನದಲ್ಲಿ ಓಟರ್ ಐಡಿ ಮ್ಯಾಟರು ಸದ್ದು ಮಾಡಲಿದ್ದು, ಕಬ್ಬಿನ ಬೆಲೆ ನಿಗದಿಯ ವಿಚಾರವೂ ಸದ್ದು ಮಾಡುವ ಸಾಧ್ಯತೆ ಇದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ